ಯೋಜನೆ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ
ಕನ್ನಡಪ್ರಭ ವಾರ್ತೆ ಸಿಂಧನೂರು ಆ.2
ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಲು ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವಕಾಂಕ್ಷೆಯ ಕಾರ್ಯಕ್ರಮಗಳನ್ನು ಪ್ರತಿಯೊಂದು ಮಗುವಿಗೆ ಮುಟ್ಟಿಸಲು ಅಧಿಕಾರಿಗಳು ಶ್ರಮಿಸಬೇಕೆಂದು ನಗರಸಭಾ ಸದಸ್ಯ ಶೇಖರಪ್ಪ ಗಿಣಿವಾರ ಹೇಳಿದರು.
ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಮತ್ತು ನಗರಸಭೆಯ ಆಶ್ರಯದಲ್ಲಿ ನಗರದ ಲಕ್ಷ್ಮೀ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುವರ್ಣ ಆರೋಗ್ಯ ಚೈತನ್ಯ ಶಾಲಾ ಮಕ್ಕಳ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾಲು ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರಂಭಿಸಿರುವ ಈ ಎರಡು ಯೋಜನೆಗಳು ಯಶಸ್ವಿಯಾದಲ್ಲಿ ಮಗುವಿನ ಆರೋಗ್ಯವು ಸದೃಢವಾಗುವುದರ ಜೊತೆಗೆ ಉನ್ನತ ಗುರಿ ತಲುಪಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಎಲ್ಲರೂ ಪ್ರಮಾಣಿಕವಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ಮುಖ್ಯ ಅಥಿತಿಗಳಾಗಿ ತಾಲೂಕಾ ಆರೋಗ್ಯಾಧಿಕಾರಿ ಸೈಯದ್ ಹಸನ್ ಹುಸೇನ್ ಮಾತನಾಡಿ, 2006 ರಿಂದ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ ಆರಂಭಗೊಂಡ ನಂತರ ತಾಲೂಕಿನಲ್ಲಿ ಹಲವಾರು ಮಕ್ಕಳು ಉನ್ನತ ಚಿಕಿತ್ಸೆ ಪಡೆದಿದ್ದು, ವಿಶೇಷವಾಗಿ ಹೃದಯ ರೋಗದಂತಹ ಗಂಭೀರ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಸೌಲಭ್ಯ ಪಡೆದಿದ್ದಾರೆ. ಈ ವರ್ಷ ಶಾಲಾ ಮತ್ತು ಅಂಗನವಾಡಿ ಮಕ್ಕಳ ತಪಾಸಣೆಗೋಸ್ಕರವೇ ಇಬ್ಬರು ವೈದ್ಯರು ಹಾಗೂ ಶುಶ್ರೂಷಕಿಯರನ್ನು ನೇಮಿಸಲಾಗಿದ್ದು, ಇಂದಿನಿಂದ ವರ್ಷಪೂರ್ತಿ ಮಕ್ಕಳ ತಪಾಸಣೆ ನಿರಂತರವಾಗಿ ನಡೆಯುತ್ತದೆ. ಗಂಭೀರ ಖಾಯಿಲೆಗೆ ಗುರುತಿಸಿದ ಮಕ್ಕಳನ್ನು ಯಶಸ್ವಿನಿ ಯೋಜನೆಯಡಿ ಗುರುತಿಸಿದ ಆಸ್ಪತ್ರೆಗಳಿಗೆ ಕಳುಹಿಸಿಕೊಡಲಾಗುವುದು. ಇದಕ್ಕಾಗಿ ಸರ್ಕಾರ ಅಂದಾಜು 2 ಲಕ್ಷದ ವರೆಗೆ ಹಣ ಖರ್ಚೆ ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷೆ ದಾವಲಬೀ ವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ವೈದ್ಯಾಧಿಕಾರಿಗಳಾದ ಡಾ. ಶಂಕರಚಾರ್ಯ, ಡಾ. ಸೌಮ್ಯಶ್ರೀ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚೆನ್ನಬಸಪ್ಪ ಕುಂಬಾರ, ಶುಶ್ರೂಷಕಿಯರಾದ ಅಸ್ಮತ್ಬೇಗಂ, ರೇಣುಕಾ, ಮುಖ್ಯ ಗುರು ವನಮಾಲಾ, ಶಿಕ್ಷಕಿ ನಿರ್ಮಲಾ ಪಾಲ್ಗೊಂಡಿದ್ದರು. ಶಾಲಾ ಮಕ್ಕಳು ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುವರ್ಣ ಹಿರೇಮಠ ಸ್ವಾಗತಿಸಿ ನಿರೂಪಿಸಿದರು. ಅನುಸೂಯ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

