ಶಾಸಕರೊಂದಿಗೆ ಯುವಕರ ಜಟಾಪಟಿ
ಕನ್ನಡಪ್ರಭ ವಾರ್ತೆ ಸಿಂಧನೂರು ಆ.2
ತಾಲೂಕಿನ ಹೊಗರನಾಳ ಗ್ರಾಮದ ಯುವಕರ ಮತ್ತು ಮಸ್ಕಿ ಶಾಸಕ ಪ್ರತಾಪಗೌಡರ ನಡುವೆ ಮಾತಿನ ಜಟಾಪಟಿ ನಡೆದ ಪ್ರಸಂಗ ಜರುಗಿತು.
ಶಾಸಕರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಗ್ರಾಮದ ಮುಖಂಡರು ಮತ್ತು ಯುವಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು ಕುಡಿವ ನೀರು, ದುರಸ್ತಿ ಕಾಣದ ರಸ್ತೆ, ಮಹಿಳಾ ಶೌಚಾಲಯ, ಸಮುದಾಯ ಭವನ ಮತ್ತಿತರ ಅಹವಾಲುಗಳನ್ನು ಹೇಳಿಕೊಂಡರು.
ಚುನಾವಣೆಗೆ ಪೂರ್ವದಲ್ಲಿ ಹಾಳುಬಿದ್ದ ಮಲ್ಲಿಕಾರ್ಜುನ ದೇವಸ್ಥಾನವನ್ನು ಚುನಾವಣೆಯಲ್ಲಿ ಗೆದ್ದರೆ ಕಟ್ಟಿಸಿಕೊಡುವ ಭರವಸೆ ನೀಡಿದ್ದೀರಿ, ಈಗ ದೇವಸ್ಥಾನಕ್ಕೆ ನೆರವು ನೀಡುವಂತೆ ಕೇಳಿದರೆ ನೀವು ಕೆಜೆಪಿಗೆ ಮತ ಹಾಕಿರುವಿರಿ ನಮ್ಮನ್ನು ಕೇಳಬೇಡಿ ಎಂದು ಶಾಸಕ ಪಾಟೀಲರು ಹೇಳಿದ್ದಕ್ಕೆ ಗ್ರಾಮಸ್ಥರು ಸಿಟ್ಟಿಗೆದ್ದು ಮಾತಿನ ಚಕಮಕಿ ನಡೆಯಿತು. ನಂತರ ಮಧ್ಯಪ್ರವೇಶಿಸಿದ ಕಾಂಗ್ರೆಸ್ ಕಾರ್ಯಕರ್ತರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ಚರ್ಚೆಯಲ್ಲಿ ಪಂಪಾಪತಿ, ಪ್ರಕಾಶ, ವಿರುಪಣ್ಣ, ಶರಣ್ಣಪ್ಪ, ಶಿವರಾಜ, ಮಂಜುನಾಥ ಮತ್ತಿತರರು ಭಾಗವಹಿಸಿದ್ದರು.
ಮಾತಿನ ಚಕಮಕಿ ನಡೆಯುವ ಪೂರ್ವದಲ್ಲಿ ಸಭೆ ನಡೆಸಿ 19 ಸಾವಿರ ಮತಗಳಿಂದ ಆಯ್ಕೆ ಮಾಡಲು ಕಾರಣರಾದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಶಾಸಕರ ಜೊತೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರೇಶ ಗಚ್ಚಿನಮನಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

