ರಾಯಚೂರು

ಕನಿಕರದ ಬದಲು ಸೌಲಭ್ಯ ಕಲ್ಪಿಸಿ: ಪಾಟೀಲ್

Published On :

ಕನ್ನಡಪ್ರಭ ವಾರ್ತೆ   ರಾಯಚೂರು   ಆ.2
ಅಂಧ ಮಕ್ಕಳಿಗೆ ಕನಿಕರ ತೋರುವ ಬದಲು ಅಗತ್ಯ ಸೌಲಭ್ಯ ಕಲ್ಪಿಸಿ ಮುಖ್ಯ ವಾಹಿನಿಗೆ ತರಲು ಸರ್ಕಾರ ಮತ್ತು ಸಮಾಜ ಮುಂದಾಗಬೇಕೆಂದು ಶಾಸಕ ಡಾ. ಶಿವರಾಜ್ ಪಾಟೀಲ್ ಸಲಹೆ ನೀಡಿದರು.
ನಗರದಲ್ಲಿ ಶುಕ್ರವಾರ ಮಾಣಿಕಪ್ರಭು ಅಂಧ ಮಕ್ಕಳ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಅಂಧ ಮಕ್ಕಳ ಬಾಳಿಗೆ ಬೆಳಕು ನೀಡುವ ಕಾರ್ಯವನ್ನು ಶಿಕ್ಷಣ ನೀಡಿಕೆ ಮೂಲಕ ಝವಾರ್ ಕುಟುಂಬದವರು ಮಾಡುತ್ತಿರುವುದು ಶ್ಲಾಘನೀಯ. ಶಾಲೆಗೆ ಕಂಪ್ಯೂಟರ್ ಅವಶ್ಯಕತೆಯಿದ್ದು, ಶಾಸಕರ ಅನುದಾನದಲ್ಲಿ ಒದಗಿಸುವುದಾಗಿ ತಿಳಿಸಿದರು.
ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಮಾತನಾಡಿ, ಅನ್ನದಾನ, ರಕ್ತದಾನ ಮಾಡುವುದನ್ನು ಎಲ್ಲೆಡೆ ಕಾಣುತ್ತೇವೆ. ಆದರೆ ಅಂಧ ಮಕ್ಕಳಿಗೆ ಶಿಕ್ಷಣ ನೀಡಿಕೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದು ಬಹುದೊಡ್ಡ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ಸ್ಥಿತಿವಂತರು ಬಡ ಮಕ್ಕಳ ನೆರವಿಗೆ ಮುಂದೆ ಬರುವಂತೆ ಮನವಿ ಮಾಡಿದರು.
ಮಾಣಿಕಪ್ರಭು ಅಂಧ ಮಕ್ಕಳ ಶಾಲೆಯ ಮುಖ್ಯಗುರು ಕುಪೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿರುವ ಅಂಧ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಸಂಸ್ಥೆಯನ್ನು ಆರಂಭಿಸಲಾಗಿದೆ. ಅಂಧ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಭವಿಷ್ಯದ ಬದುಕಿಗೆ ಭದ್ರತೆ ಕಲ್ಪಿಸುವ ಕಾರ್ಯ ಶಿಕ್ಷಣ ಸಂಸ್ಥೆ ಮಾಡುತ್ತಿದೆ ಎಂದರು.
ಮಾಣಿಕಪ್ರಭು ಅಂಧ ಮಕ್ಕಳ ಶಾಲೆ ಮತ್ತು ಶಾಲೆಯ ಸಿಬ್ಬಂದಿ ಸೂಕ್ತ ಭದ್ರತೆ ಕಲ್ಪಿಸುವಂತೆ ಅವರು ಈ ವೇಳೆ ಮನವಿ ಮಾಡಿದರು.
ಶ್ರೀ ಮಾಣಿಕಪ್ರಭು ಶಿಕ್ಷಣ ಸಮಿತಿ ಅಧ್ಯಕ್ಷ ಆನಂದರಾಜು, ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಕಿಶನ ಗೋಪಾಲ್ ಝವಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ರೋಹಿಣಿ ಹಿರೇಮಠ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ವೀರನಗೌಡ, ರೋಟರಿ ಕ್ಲಬ್ನ ಅಧ್ಯಕ್ಷ ಚಂದ್ರಕಾಂತ ಇದ್ದರು. ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.