ಚಿತ್ರಕಲೆ ಬಗ್ಗೆ ಆಸಕ್ತಿ ಮೂಡಿಸಲು ಸಲಹೆ
ರಾಯಚೂರು: ಮಕ್ಕಳಿಗೆ ಶಿಕ್ಷಣದ ಜತೆಗೆ ಚಿತ್ರಕಲೆಯ ಬಗ್ಗೆಯೂ ಆಸಕ್ತಿ ಮೂಡಿಸುವಂಥ ಕಾರ್ಯವನ್ನು ಶಿಕ್ಷಕರು ಮಾಡಬೇಕಿದೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ವಿ.ಜಿ. ಅಂದಾನಿ ಸಲಹೆ ನೀಡಿದರು.
ಅವರು ನಗರದಲ್ಲಿ ಶುಕ್ರವಾರ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿ, ಚಿತ್ರಕಲೆಯಲ್ಲಿ ಮಕ್ಕಳಿಗೆ ಆಸಕ್ತಿ ಮೂಡಿಸುವ ಮೂಲಕ ಸರ್ವಾಂಗೀಣ ಪ್ರಗತಿಗೆ ದಾರಿಯಾಗಲಿದೆ ಎಂದು ಹೇಳಿದರು.
ಚಿತ್ರಕಲೆಗೆ ಅನೇಕ ವರ್ಷಗಳ ಇತಿಹಾಸವಿದ್ದು, ಚಿತ್ರಕಲೆಯಿಂದಾಗಿ ವಿಶ್ವವಿಖ್ಯಾತ ಸ್ಮಾರಕಗಳ ಪರಿಚಯ ಹೊರಜಗತ್ತಿಗೆ ತಿಳಿಸಿಕೊಡಲು ಸಾಧ್ಯವಾಗಿದೆ. ಚಿತ್ರರಂಗ ಸೇರಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಚಿತ್ರಕಲೆಗೆ ಪ್ರಾಮುಖ್ಯತೆಯಿದೆ. ಮಕ್ಕಳ ಕಲಿಕೆಗೆ ಚಿತ್ರಕಲೆ ಪ್ರೇರಣೆಯಾಗಲಿದೆ ಎಂದರು.
ಬಿಇಒ ಮಲ್ಲಿಕಾರ್ಜುನ ಮಾತನಾಡಿ, ತಾಲೂಕಿನಲ್ಲಿ ಚಿತ್ರಕಲಾ ಶಿಕ್ಷಣ ನೀಡುವ ಶಿಕ್ಷಕರ ಕೊರತೆಯಿದೆ.ಆದರೂ ಇಂಥ ಕಾರ್ಯಾಗಾರಗಳ ಮೂಲಕ ಮಕ್ಕಳಲ್ಲಿ ಚಿತ್ರಕಲೆಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಹಿರಿಯ ಚಿತ್ರಕಲಾ ಪರಿವೀಕ್ಷಕ ದೇವೇಂದ್ರಪ್ಪ, ವಿಷಯ ಪರಿವೀಕ್ಷಕ ಹೀರಾಬಾಯಿ, ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ. ಮಲ್ಲಿಕಾರ್ಜುನ, ಎಚ್.ಎಚ್. ಮ್ಯಾದಾರ್ ಸೇರಿ ಅನೇಕರಿದ್ದರು.
ವಿವಿಧೆಡೆಯಿಂದ ಆಗಮಿಸಿದ್ದ ಚಿತ್ರಕಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

