ಅಂಬಾಮಠ ದೇಗುಲ ರಸ್ತೆ ನಿರ್ಮಾಣಕ್ಕೆ 2.17 ಕೋಟಿ
ಕನ್ನಡಪ್ರಭ ವಾರ್ತೆ ಸಿಂಧನೂರು ಆ.3
ಸಾಲಗುಂದಾದಿಂದ ಅಂಬಾಮಠ ದೇವಸ್ಥಾನದವರೆಗೆ ದ್ವಿಪಥ ರಸ್ತೆ ನಿರ್ಮಾಣಕ್ಕೆ 2.17 ಕೋಟಿ ಮಂಜೂರಾಗಿದ್ದು, ಅದರಲ್ಲಿ ಈಗಾಗಲೇ 1 ಕೋಟಿ ಬಿಡುಗಡೆಯಾಗಿದೆ ಎಂದು ಶಾಸಕ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ತಾಲೂಕಿನ ಸಿದ್ಧಪರ್ವತ ಅಂಬಾಮಠ ಸರ್ವಾಂಗೀಣ ಅಭಿವೃದ್ಧಿಗೆ ಶನಿವಾರ ಅಂಬಾಮಠದ ಕಲ್ಯಾಣ ಮಂಟಪದಲ್ಲಿ ನಡೆದ ಅಧಿಕಾರಿಗಳ, ಜನಪ್ರತಿನಿಧಿಗಳ ಹಾಗೂ ದೇವಸ್ಥಾನ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಗತಿಯಲ್ಲಿ ಉದ್ಯಾನವನ, ಕಾಂಪೌಂಡ್ ಕಾಮಗಾರಿ: ಉದ್ಯಾನವನ ಮತ್ತು ಕಾಂಪೌಂಡ್ ನಿರ್ಮಾಣಕ್ಕೆ 1.5 ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಜಿಪಂ.ನಿಂದ ಕುಡಿವ ನೀರಿನ ಮೇಲೆತ್ತರದ ತೊಟ್ಟಿ ನಿರ್ಮಿಸಿ ಶುದ್ಧೀಕರಣ ಘಟಕ ಅಳವಡಿಸುವುದಕ್ಕೆ 50 ಲಕ್ಷ ಮಂಜೂರಾಗಿದೆ ಎಂದು ಹೇಳಿದರು.
ಶಂಕುಸ್ಥಾಪನೆ: ರಿಂಗ್ ರಸ್ತೆ, ಬಸ್ ನಿಲ್ದಾಣ, ಶೌಚಾಲಯ, ವಸತಿ ಗೃಹ, ಕೆರೆ ಅಭಿವೃದ್ಧಿ ಮತ್ತಿತರ ಕಾಮಗಾರಿಗಳಿಗೆ ಶೀಘ್ರ ಕ್ರಿಯಾಯೋಜನೆ ತಯಾರಿಸುವಂತೆ ಸಭೆಯಲ್ಲಿ ಹಾಜರಿದ್ದ ಪ್ರವಾಸೋದ್ಯಮ ಇಲಾಖೆ ಎಂಜಿನಿಯರ್ ಮೀನಾಸಿಂಗ್ಗೆ ಶಾಸಕ ಹಂಪನಗೌಡ ಸೂಚಿಸಿದರು. ಸಭೆ ಮುಗಿದ ನಂತರ ದೇವಸ್ಥಾನ ಸಮಿತಿಯಿಂದ 34 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ದಾಸೋಹ ಮಂದಿರದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಲಿಂಗಸ್ಗೂರು ಸಹಾಯಕ ಆಯುಕ್ತ ಟಿ.ಯೋಗೀಶ, ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ, ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಆರ್. ಗೌಡರು, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜ, ತಾಪಂ ಅಧ್ಯಕ್ಷೆ ಬಸಮ್ಮ, ಉಪಾಧ್ಯಕ್ಷ ನಾಗಪ್ಪ, ಇಒ ರಮೇಶ ತಳವಾರ, ಜಿಪಂ ಸದಸ್ಯ ಚಂದೂಸಾಬ ಮುಳ್ಳೂರು, ಕಾಳಿಂಗಪ್ಪ ವಕೀಲ, ಎಪಿಎಂಸಿ ಅಧ್ಯಕ್ಷ ಕರಿಯಪ್ಪ ವಕೀಲ, ಉಪಾಧ್ಯಕ್ಷ ರಾಮಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ವೆಂಕಟರೆಡ್ಡಿ ಹುಡಾ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

