ರಾಯಚೂರು

ಮೇಲ್ವಿಚಾರಕಿ ವರ್ಗಾವಣೆ ರದ್ದತಿಗೆ ಆಗ್ರಹ; ಪ್ರತಿಭಟನೆ

Published On :

ರಾಯಚೂರು: ಬಿಸಿಎಂ ವಸತಿ ನಿಲಯದ ಮೇಲ್ವಿಚಾರಕಿಯನ್ನು ವರ್ಗಾಯಿಸದಂತೆ ಒತ್ತಾಯಿಸಿ ನಗರದ ಬಿಸಿಎಂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಿಸಿಎಂ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ, ಸದ್ಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿನಿಲಯದ ಮೇಲ್ವಿಚಾರಕಿಯಾಗಿರುವ ರಾಧಾಬಾಯಿ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಬೇರೆಡೆಗೆ ವರ್ಗಾಯಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಮೇಲ್ವಿಚಾರಕಿ ರಾಧಾಬಾಯಿ ಅವರು ವಿದ್ಯಾರ್ಥಿನಿಯರಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುತ್ತಿದ್ದಾರೆ. ಸಮರ್ಪಕ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ವಿನಾಕಾರಣ ಬೇರೆಡೆಗೆ ವರ್ಗಾಯಿಸುವ ಕಾರ್ಯ ಅಧಿಕಾರಿಗಳು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ವಿದ್ಯಾರ್ಥಿನಿಯರ ಬೇಡಿಕೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.