ವೈದ್ಯಕೀಯ ಉಪಕರಣಗಳ ಖರೀದಿಗೆ ಸಾಲ
ರಾಯಚೂರು: ನಗರದ ಭಾರತೀಯ ವೈದ್ಯಕೀಯ ಮಂಡಳಿ ಸಭಾಂಗಣದಲ್ಲಿ ಇತ್ತೀಚೆಗೆ ಪ್ರಗತಿ ಗ್ರಾಮೀಣ ಬ್ಯಾಂಕ್ ವತಿಯಿಂದ ವೈದ್ಯ ವೃಂದಕ್ಕೆ ಸಾಲ ಸೌಲಭ್ಯ ನೀಡಿಕೆ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರಕ್ಕೆ ಚಾಲನೆ ನೀಡಿದ ಬ್ಯಾಂಕಿನ ಅಧ್ಯಕ್ಷ ಎಂ.ಜಿ. ಭಟ್ ಮಾತನಾಡಿ, ವೈದ್ಯರಿಗೆ ವೈದ್ಯಕೀಯ ಉಪಕರಣಗಳ ಖರೀದಿಗೆ ಪ್ರಗತಿ ಗ್ರಾಮೀಣ ಬ್ಯಾಂಕ್ ಸಾಲ ಸೌಲಭ್ಯ ನೀಡುತ್ತಿದೆ. ಜಿಲ್ಲೆಯ ವೈದ್ಯರು ಸಾಲ ಸೌಲಭ್ಯದ ಪ್ರಯೋಜನ ಪಡೆಯಲು ಮನವಿ ಮಾಡಿದರು.
ಬ್ಯಾಂಕು ಶಿಕ್ಷಕ ವೃಂದಕ್ಕೆ ಮೊದಲಿಗೆ ಹಾಗೂ ಆನಂತರದಲ್ಲಿ ವೈದ್ಯರಿಗೆ ಗೌರವಿಸುತ್ತದೆ. ಶಿಕ್ಷಕರು ಜ್ಞಾನಾರ್ಜನೆಗೆ ಸಹಾಯಕರಾದರೆ, ವೈದ್ಯರು ಆರೋಗ್ಯ ರಕ್ಷಕರಾಗಿದ್ದಾರೆಂದ ಅವರು, ಆರಂಭದಿಂದಲೂ ಬ್ಯಾಂಕ್ ಗ್ರಾಮೀಣ ಸಂಸ್ಕೃತಿಯನ್ನು ಅಳವಡಿಸಿಕೊಂಡು ಕೃಷಿ, ಸಣ್ಣ ವ್ಯಾಪಾರ ವಹಿವಾಟು, ಗ್ರಾಮೀಣ ಕುಶಲಕರ್ಮಿಗಳಿಗೆ ಸಾಲ ಸೌಲಭ್ಯ ನೀಡುತ್ತಿದೆ ಎಂದರು.
ಪ್ರಗತಿ ಗ್ರಾಮೀಣ ಬ್ಯಾಂಕ್ ಹೆಚ್ಚಿನ ಪ್ರಮಾಣದ ಠೇವಣಿ ಹೊಂದುವ ಮೂಲಕ ಇನ್ನಿತರೆ ಬ್ಯಾಂಕುಗಳಿಗಿಂತ ತಾನೇನೂ ಕಮ್ಮಿಯಿಲ್ಲ ಎಂಬಂಥ ಸಾಧನೆ ಮಾಡುತ್ತಿದೆ. ಬ್ಯಾಂಕಿನಲ್ಲಿ 2156 ಸಿಬ್ಬಂದಿ, 1216 ಹಿರಿಯ ಅಧಿಕಾರಿಗಳು, ಇತರ 940 ಸಿಬ್ಬಂದಿ ಜತೆಗೂಡಿ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಪ್ರಗತಿ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ರಾಜಶೇಖರಪ್ಪ ಮಾತನಾಡಿ, ಬ್ಯಾಂಕ್ ಎಲ್ಲ ಕಟ್ಟಡ, ಉಪಕರಣ, ಸಣ್ಣ ಉದ್ದಿಮೆ ಹಾಗೂ ಸಂಬಳದ ಆಧಾರದ ಸಾಲವನ್ನು ಮಂಜೂರು ಮಾಡುತ್ತದೆ. ಜಿಲ್ಲೆಯ ವೈದ್ಯರಿಗಾಗಿ ಹೊಸ ಸಾಲ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರ ಪ್ರಯೋಜನ ಪಡೆಯುವಂತೆ ಮನವಿ ಮಾಡಿದರು. ಡಾ. ಶ್ರೀಶೈಲ ಅಮರಖೇಡ್, ಡಾ. ಮಹಾಲಿಂಗಪ್ಪ, ಐಎಂಎ ಅಧ್ಯಕ್ಷ ಡಾ. ಸಿ.ಎನ್. ಕುಲಕರ್ಣಿ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

