ಸೆ.22ಕ್ಕೆ ವಿಶ್ವಕರ್ಮ ಜಯಂತಿ; ನಿರ್ಧಾರ
ರಾಯಚೂರು: ತಾಲೂಕಿನ ಪಂಚಮುಖಿ ಗಾಣದಾಳ ಗ್ರಾಮದಲ್ಲಿ ಸೆ.22ರಂದು ಜಿಲ್ಲಾ ಮಟ್ಟದ ವಿಶ್ವಕರ್ಮ ಜಯಂತಿ ಆಚರಿಸಲು ಇತ್ತೀಚೆಗೆ ಗ್ರಾಮದಲ್ಲಿ ಕರೆದಿದ್ದ ಸಮಾಜದ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಮಾಜದ ಸಂಘಟಕ ಮಾರುತಿ ಬಡಿಗೇರ್, ವಿಶ್ವಕರ್ಮ ಸಮಾಜಕ್ಕೆ ಸೇರಿದ ಕರ್ನಾಟಕ ಮತ್ತು ಆಂಧ್ರದ ಜನತೆ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗಾಣದಾಳ ಪಂಚಮುಖಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಸೂಕ್ತ ಎಂದರು. ಮಂತ್ರಾಲಯ, ಆದೋನಿ, ಎಮ್ಮಿಗನೂರು, ಕರ್ನೂಲ್, ಐಜಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಂದ ಐದು ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಸಮಾಜದ ರಾಜ್ಯಾಧ್ಯಕ್ಷ ನಂಜುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮೀಣ ಶಾಸಕ ತಿಪ್ಪರಾಜು ಜಯಂತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆಂದು ತಿಳಿಸಿದರು. ಸಭೆಯಲ್ಲಿ ವಿಶ್ವಕರ್ಮ ಸಮಾಜದ ಪ್ರಮುಖರಾದ ಪ್ರಾಣೇಶ್ ಆಚಾರಿ, ಪ್ರಹ್ಲಾದ್ ಆಚಾರಿ, ಡಾ. ವೆಂಕಟೇಶ್, ರಾಮು,ಬ್ರಹ್ಮ ಗಣೇಶ್, ಮನೋಹರ್ ಪಾಲ್ಗೊಂಡಿದ್ದರು.
ನಾಳೆ ಕಾಂಗ್ರೆಸ್ ಪಕ್ಷದ ಸಭೆ
ರಾಯಚೂರು: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಗುರುತಿಸಲು ಆ.7ರಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಭೆ ಆಯೋಜಿಸಲಾಗಿದೆ. ಜಿಲ್ಲೆಯ ವೀಕ್ಷಕರಾದ ಡಾ. ಎ.ಬಿ. ಮಾಲಕರೆಡ್ಡಿ, ಕಾಕಾ ಸಾಹೇಬ್ ಪಾಟೀಲ್, ಖಾಜಿ ಅರ್ಷದ್ ಅಲಿ, ರಾಜಶೇಖರ್ ಮೆಣಸಿನಕಾಯಿ, ಗೌತಮ್, ಎಸ್.ಎ. ಜಿದ್ದಿ, ಜೆ. ಅಲೆಕ್ಸಾಂಡರ್ ಅವರು ಆ.7ರಂದು ಬೆಳಗ್ಗೆ 11.30ಕ್ಕೆ ಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಎಲ್ಲ ಕಾಂಗ್ರೆಸ್ ಪಕ್ಷದ ಪ್ರಮುಖರು, ಗಣ್ಯರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪಕ್ಷದ ಪ್ರ. ಕಾರ್ಯದರ್ಶಿ ಅಮರೇಗೌಡ ಹಂಚಿನಾಳ ತಿಳಿಸಿದ್ದಾರೆ.
ಮಲ್ಲಪ್ಪ ಪೂಜಾರ
ಸಿಂಧನೂರು: ನಗರದ ಟಿಯುಸಿಐ ಮುಖಂಡ ಮಲ್ಲಪ್ಪ ಪೂಜಾರ ಭಾನುವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 50 ವರ್ಷ ವಯಸ್ಸಾಗಿತ್ತು. ಟಿಯುಸಿಐ ರಾಜ್ಯಾಧ್ಯಕ್ಷರು ಆದ ಅವರ ಸಹೋದರ ಡಿ.ಎಚ್. ಪೂಜಾರ ಸೇರಿದಂತೆ ಹುಸೇನಪ್ಪ ಪೂಜಾರ, ಪತ್ನಿ ಮತ್ತು ನಾಲ್ಕು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

