ತಜ್ಞ ವೈದ್ಯರ ನೇಮಕಕ್ಕೆ ರೈತ ಸಂಘ ಮನವಿ
ಲಿಂಗಸ್ಗೂರು: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತೆರವಾದ ವಿವಿಧ ತಜ್ಞ ವೈದ್ಯರನ್ನು ನೇಮಕ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಮಹಾಂತಪ್ಪ ವಿಠ್ಲಾಪುರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಪಟ್ಟಣದ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ಸ್ತ್ರೀ ರೋಗ, ಚರ್ಮ ರೋಗ, ನೇತ್ರ ತಜ್ಞರ, ಫಿಜಿಷಿಯನ್ ಹಾಗೂ ದಂತ ವೈದ್ಯರ ಹುದ್ದೆ ತೆರವಾಗಿದ್ದು, ಇದರಿಂದ ಬಡರೋಗಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅಧೀನದ ಎಆರ್ಟಿ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆಗೆ ವರ್ಗಾವಣೆಗೊಂಡ ಡಾ. ಲಕ್ಷ್ಮಪ್ಪ ಅವರು ಮರಳಿ ಲಿಂಗಸ್ಗೂರು ಆಸ್ಪತ್ರೆಗೆ ಬರಲು ಸಿದ್ಧರಿದ್ದಾರೆ ಹಾಗೂ ತಾಲೂಕಿನ ಆನೆಹೊಸೂರು ಗ್ರಾಮದ ದಂತ ವೈದ್ಯರು ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಕೂಡಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಬೇಕು.
ರಾಜ್ಯ ಸರ್ಕಾರ ಆಸ್ಪತ್ರೆಗಳಲ್ಲಿ ತೆರವಾಗಿರುವ ವಿವಿಧ ತಜ್ಞರ ಹುದ್ದೆ ಹಾಗೂ ಅವಶ್ಯವಿರುವ ಕಡೆಗಳಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ತುಂಬಲು ಅಧಿಕಾರ ನೀಡಿರುವ ಕುರಿತು ತಿಳಿದು ಬಂದಿದೆ. ಈ ಎಲ್ಲವನ್ನು ಪರಿಗಣಿಸಿ ಕೂಡಲೇ ಲಿಂಗಸ್ಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರವಾದ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

