ಶಿಷ್ಯ ವೇತನ ಅರ್ಜಿ ಕೊನೆ ದಿನ ಮುಂದಕ್ಕೆ
ಕನ್ನಡಪ್ರಭ ವಾರ್ತೆ , ಸಿಂಧನೂರು , ಆ.7
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶನಾಲಯದಿಂದ ಮುಸ್ಲಿಂ, ಕ್ರೈಸ್ತ್, ಪಾರ್ಸಿ, ಬುದ್ಧ, ಜೈನ ಜನಾಂಗದ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ 2013- 14ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹಿಂದೆ ನೀಡಿದ್ದ ಕೊನೆ ದಿನಾಂಕವನ್ನು ಆ.17 ರವರೆಗೆ ಮುಂದೂಡಲಾಗಿದೆ ಎಂದು ನಗರದ ಕನಕನಗರ ಸಿಆರ್ಪಿ ವೀರೇಶ ಗೋನವಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ 2013- 14ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ಹಾಗೂ ಹಿಂದಿನ ತರಗತಿಗಳಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಪಾಲಕರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.
ಆಯಾ ಶಾಲೆಗಳ ಮುಖ್ಯಗುರುಗಳು ಎಲ್ಲ ಮಕ್ಕಳ ಅರ್ಜಿಗಳನ್ನು ಪಾಲಕರಿಂದ ಪಡೆದು ಹೊಸ ನಮೂನೆ ಮತ್ತು ನವೀಕರಣ ನಮೂನೆಗಳಲ್ಲಿ ಪ್ರತ್ಯೇಕವಾಗಿ ನಿಗದಿತ ನಮೂನೆಗಳಲ್ಲಿ ಭರ್ತಿ ಮಾಡಿ ಆ.24 ರೊಳಗೆ ಬಿಇಒ ಕಚೇರಿಗೆ ಸಲ್ಲಿಸಲು ತಿಳಿಸಿದ್ದಾರೆ.
ಆಯ್ಕೆ ಪಟ್ಟಿ: 2012- 13ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಮಂಜೂರಾಗಿದ್ದು, ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಅವರ ಖಾತೆಗಳಿಗೆ ನೇರವಾಗಿ ಹಣ ಸಂದಾಯ ಮಾಡಲಾಗಿದೆ. ಖಾತೆಯನ್ನು ಹೊಂದಿರದ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ಸಂದಾಯ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು, ಪಾಲಕರು, ವಿದ್ಯಾರ್ಥಿಗಳು ಗಮನ ಹರಿಸಬೇಕೆಂದು ಕೋರಿದ್ದಾರೆ.
15ರಿಂದ ವೈದಿಕ ಪಾಠಶಾಲೆ ಆರಂಭ
ಸಿಂಧನೂರು: ನಗರದ ಬಾಳೆಹೊನ್ನೂರು ರಂಭಾಪುರಿ ಖಾಸಾ ಶಾಖಾಮಠದಲ್ಲಿ ವೇ.ಮೂ. ಕರಿಬಸಯ್ಯಸ್ವಾಮಿ ಸರಗಣಾಧೀಶ್ವರ ಮಠ ಸಂಸ್ಕೃತ, ಜ್ಯೋತಿಷ್ಯ, ವೈದಿಕ ಪಾಠಶಾಲೆಯು ಅ.15 ರಿಂದ ಆರಂಭಗೊಳ್ಳುವುದು ಎಂದು ಪಾಠಶಾಲೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಅ.5 ರಿಂದ ಪ್ರವೇಶ ಅರ್ಜಿ ಫಾರಂಗಳು ದೊರೆಯುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

