12ರಂದು ನೇತ್ರ ತಪಾಸಣೆ
ಸಿಂಧನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 66ನೇ ಹುಟ್ಟುಹಬ್ಬದ ಅಂಗವಾಗಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಅ.12 ರಂದು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಸಿದ್ದರಾಮಯ್ಯ ಅಭಿಮಾನಿಗಳ ಸಂಘದ ಅಧ್ಯಕ್ಷ ಕೆ. ಲಿಂಗರಾಜ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೇತ್ರ ಚಿಕಿತ್ಸಾ ಶಿಬಿರದಲ್ಲಿ ನೇತ್ರ ತಜ್ಞರಾದ ಡಾ. ಸದಾನಂದ ಎಲ್.ಪೂಜಾರಿ, ಡಾ.ರಮೇಶ, ಡಾ.ಶರಣಬಸವ, ಡಾ.ಚನ್ನನಗೌಡ ಪಾಟೀಲ್, ಡಾ.ಬಸನಗೌಡ ಪಾಲ್ಗೊಳ್ಳುವರು. ಶಸ್ತ್ರಚಿಕಿತ್ಸೆ ಮಾಡಿಸಿಕೊಂಡವರಿಗೆ ಹಾಗೂ ಒಬ್ಬ ಸಹಾಯಕರಿಗೆ ಊಟದ ವ್ಯವಸ್ಥೆ ಇರುತ್ತದೆ. ಲಘು ಹಾಸಿಗೆ, ಊಟದ ತಟ್ಟೆ, ಒಬ್ಬ ಜೊತೆಗಾರರನ್ನು ಕರೆತರಬೇಕು. ಕಣ್ಣಿನ ಪೊರೆಯಿಂದಾಗಿ ಅಂಧತ್ವಕ್ಕೆ ಒಳಗಾದವರು ಈ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಅ.12 ರಂದು ಬೆಳಿಗ್ಗೆ 8ಕ್ಕೆ ಹಾಜರಿರಬೇಕೆಂದು ಹೇಳಿದರು.
ಉದ್ಘಾಟನಾ ಸಮಾರಂಭವನ್ನು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಉದ್ಘಾಟಿಸುವರು. ಶಾಸಕ ಹಂಪನಗೌಡ ಬಾದರ್ಲಿ ಜ್ಯೋತಿ ಬೆಳಗಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ವೆಂಕಟರಾವ್ ನಾಡಗೌಡ, ರಾಜಶೇಖರ ಪಾಟೀಲ್, ಚಂದುಸಾಬ ಮುಳ್ಳೂರು, ಕೆ.ಕರಿಯಪ್ಪ, ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ, ಸಮಾಜಕಲ್ಯಾಣ ಅಧಿಕಾರಿ ಕೆ.ನಾಗರಾಜ, ಸಿಐ ಶೇಖರಪ್ಪ, ಪಿಎಸ್ಐಗಳಾದ ಲಿಂಗಪ್ಪ, ಎಸ್.ಎಂ.ಪಾಟೀಲ್, ನಿರುಪಾದೆಪ್ಪ ವಕೀಲರು, ಪತ್ರಕರ್ತ ಡಿ.ಎಚ್.ಕಂಬಳಿ, ಕೆಆರ್ಎಸ್ ಜಿಲ್ಲಾಧ್ಯಕ್ಷ ಎಚ್.ಎನ್.ಬಡಿಗೇರ, ಎನ್.ಶಿವನಗೌಡ ಗೊರೇಬಾಳ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಾರಾಯಣಪ್ಪ, ಡಾ. ಸುರೇಂದ್ರಬಾಬು, ಡಾ.ಹಸನ್ ಹುಸೇನ, ವೈದ್ಯಾಧಿಕಾರಿ ಡಾ. ಕರವೀರಪ್ರಭು ಕ್ಯಾಲಕೊಂಡ ಸೇರಿದಂತೆ ವಿವಿಧ ಸಮಾಜದ ಮುಖಂಡರು ಪಾಲ್ಗೊಳ್ಳುವರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಪ್ರಶಸ್ತಿ ಪಡೆದವರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಉಪನ್ಯಾಸಕರಾದ ನಾರಾಯಣ ಬೆಳಗುರ್ಕಿ, ಶಂಕರ ಗುರಿಕಾರ ವಿಶೇಷ ಉಪನ್ಯಾಸ ನೀಡುವರು ಎಂದು ಲಿಂಗರಾಜ ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

