ರಾಯಚೂರು

ಅನ್ನಭಾಗ್ಯ ಯೋಜನೆ ಸಮರ್ಪಕ ಜಾರಿಗೆ ಆಗ್ರಹ

Published On :

ಯಾದಗಿರಿ: ರಾಜ್ಯ ಸರ್ಕಾರ ಬಡವರಿಗಾಗಿ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಸೇನೆ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.
ಬಹುತೇಕ ಗ್ರಾಮಗಳಲ್ಲಿ ಸರ್ಕಾರ ನಿಗಧಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಅಕ್ಕಿ, ಗೋಧಿ, ಸಕ್ಕರೆ ಮತ್ತು ಇತರ ಸಾಮಗ್ರಿಗಳನ್ನು ಹಂಚುತ್ತಿದ್ದಾರೆ. ಅಲ್ಲದೆ 3 ಜನ ಸದಸ್ಯರು ಇರುವ ಕುಟುಂಬಗಳಿಗೆ 30 ಕೆಜಿ ಅಕ್ಕಿ ನೀಡಲು ಸರ್ಕಾರ ಸೂಚಿಸಿದ್ದರೂ ಕಡಿಮೆ ಪ್ರಮಾಣದಲ್ಲಿ ನ್ಯಾಯಬೆಲೆ ಅಂಗಡಿಯವರು ವಿತರಣೆ ಮಾಡುತ್ತಿದ್ದಾರೆ. ಇದರಿಂದ ಬಡ ಜನತೆ ಸರ್ಕಾರದ ಯೋಜನೆಯಿಂದ ವಂಚಿತರಾಗುತ್ತಿದ್ದಾರೆಂದು ಮನವಿಯಲ್ಲಿ ದೂರಿದ್ದಾರೆ.  ಬಡವರಿಗೆ ವಂಚಿಸುವ ನ್ಯಾಯಬೆಲೆ ಅಂಗಡಿ ಮಾಲಿಕರ ವಿರುದ್ಧ ಕ್ರಮ ಜರಗಿಸಬೇಕು. ಇಲ್ಲವಾದಲ್ಲಿ ಇದರ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ, ಎಲ್ಲಾ ಗ್ರಾಮಗಳಲ್ಲಿ ಆಹಾರ ನಿರೀಕ್ಷಕರು ಬೇಟಿ ಮಾಡಿ ಪರಿಶೀಲನೆ ನಡೆಸುತ್ತಾರೆ. ಒಂದು ವೇಳೆ ಯೋಜನೆಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ  ಅಂತವರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.