ಅನುದಾನ ದುರುಪಯೋಗ:ಗುಡದೂರು ಪಿಡಿಒ ಅಮಾನತು
ಕನ್ನಡಪ್ರಭ ವಾರ್ತೆ , ಸಿಂಧನೂರು , ಆ.9
ತಾಲೂಕಿನ ಗುಡದೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳು ಸೇರಿದಂತೆ 2010ರಿಂದ 2012 ರವರೆಗೆ ಮಂಜೂರಾದ ಅಂಬೇಡ್ಕರ್, ದೇವದಾಸಿಯರ ವಸತಿ ಯೋಜನೆ ಹಾಗೂ ರಾಜೀವ್ಗಾಂಧಿ ಗ್ರಾಮೀಣ ವಸತಿ ನಿಗಮದ ನಿಯಮ ಉಲ್ಲಂಘಿಸಿ 61 ಜನ ಅನರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿರುವ ಆರೋಪದ ಮೇಲೆ ಪಿಡಿಒ ಮನೋಹರ ಅವರನ್ನು ಜಿಪಂ ಸಿಇಒ ಟಿ.ಜ್ಞಾನಪ್ರಕಾಶ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಪುಷ್ಪಮ್ಮ ಎನ್ನುವ ಫಲಾನುಭವಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರೆಂದು ನಮೂದಿಸಿರುವುದು. ಗ್ರಾಮದಲ್ಲಿ ವಾಸವಿಲ್ಲದ, ಸ್ವಂತ ಜಾಗವಿಲ್ಲದ ತಿಮ್ಮಮ್ಮ ಮತ್ತು ಮರಿಯಮ್ಮ ಎನ್ನುವವರ ಹೆಸರಿನಲ್ಲಿ ಒಂದೇ ಮನೆಗೆ ಹಣ ಪಾವತಿಸಿರುವ ಆರೋಪ ಸೇರಿದಂತೆ ವಸತಿ ಯೋಜನೆಗಳ ನಿಯಮ ಉಲ್ಲಂಘಿಸಿ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಜಿಪಂ ಯೋಜನಾ ನಿರ್ಣಾಯಕ ಮತ್ತು ಮೌಲ್ಯಮಾಪನಾಧಿಕಾರಿಗಳು ಸಿಇಒಗೆ ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸ್ಥಾನ ಬಿಡಕೂಡದು: ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಿರುವ ಜ್ಞಾನಪ್ರಕಾಶ ಅವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ಅನ್ವಯ ಆಪಾದಿತರು ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ಬಿಡಕೂಡದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

