ರಾಯಚೂರು

ಈದ್ಗಾ ಮೈದಾನದತ್ತ ನಿರ್ಲಕ್ಷ್ಯ; ಪ್ರತಿಭಟನೆ

Published On :

ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಶುಕ್ರವಾರ ರಂಜಾನ್ ಹಬ್ಬದ ಸಂದರ್ಭ ಪ್ರಾರ್ಥನೆಗೆ ತೆರಳಿದ ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿನ ಅವ್ಯವಸ್ಥೆ ಕಂಡು ತೀವ್ರ ಬೇಸರ ವ್ಯಕ್ತಪಡಿಸಿ, ಪ್ರತಿಭಟನೆಗಿಳಿದ ಪ್ರಸಂಗ ನಡೆದಿದೆ.
ಗ್ರಾಮದ ಈದ್ಗಾ ಮೈದಾನದಲ್ಲಿ ಮೃತ ಹಂದಿಯ ಅವಶೇಷ ಮತ್ತು ಶೌಚಾಲಯಕ್ಕೆ ಮೈದಾನವನ್ನೇ ಬಳಸಿದ್ದನ್ನು ಕಂಡು ಆಕ್ರೋಶಗೊಂಡ ಗ್ರಾಮದ ಮುಸ್ಲಿಂ ಜನಾಂಗದವರು ಗ್ರಾಪಂ ಆಡಳಿತದ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ ನಡೆಸಿದರು. ಸಾಮೂಹಿಕ ಪ್ರಾರ್ಥನೆಗೆಂದು ಆಗಮಿಸಿದ್ದವರು ಆಡಳಿತ ಈದ್ಗಾ ಮೈದಾನ ನಿರ್ವಹಣೆಯಲ್ಲಿ ಅಸಡ್ಡೆ ತೋರಿದ್ದರಿಂದ ಇಂಥ ದುಸ್ಥಿತಿ ಒದಗಿದೆ ಎಂದು ಆರೋಪಿಸಿದರು.
ಪ್ರಾರ್ಥನೆ ವಿಳಂಬ: ಇದರಿಂದಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ವಿಳಂಬವಾಯಿತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೈದಾನದ ಸ್ವಚ್ಛತೆಗೆ ಕ್ರಮ ಕೈಗೊಂಡರು. ಹಾಗೆಯೇ ಮುಂದಿನ ದಿನಗಳಲ್ಲಿ ಈದ್ಗಾ ಮೈದಾನದ ಸುರಕ್ಷತೆ ಮತ್ತು ಸ್ವಚ್ಛತೆಗೆ ಗಮನ ನೀಡುವುದಾಗಿ ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಗ್ರಾಪಂ ಭರವಸೆ ನೀಡಿದ ಹಿನ್ನೆಲೆ ಹೋರಾಟ ಹಿಂಪಡೆಯಲಾಯಿತು. ಆನಂತರ ಮಧ್ಯಾಹ್ನ 3ಕ್ಕೆ ಮುಸ್ಲಿಂ ಜನಾಂಗದವರು ಪ್ರಾರ್ಥನೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.