ರಾಯಚೂರು

15ರಂದು ಚಿಕಿತ್ಸಾ ಶಿಬಿರ

Published On :

ಗುಲ್ಬರ್ಗ: ನಗರದ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ಹಾಗೂ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯುತ್ಸವ ನಿಮಿತ್ತ ಆ.15 ರಂದು ಶಹಾಬಜಾರದ ಜಗದಂಬಾ ದೇವಾಲಯದ ಸಭಾಂಗಣದಲ್ಲಿ ಉಚಿತ ನೇತ್ರ ಮತ್ತು ಸಾಮಾನ್ಯ ಆರೋಗ್ಯ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10.30ರಿಂದ ಸಂಜೆ 4ರವರೆಗೆ ಈ ಶಿಬಿರ ನಡೆಯಲಿದ್ದು, ಈ ಶಿಬಿರದಲ್ಲಿ ಎಲಬು, ಕೀಳು ನೋವು, ಅಸ್ತಮಾ, ಮಕ್ಕಳ ಕುರಿತಾದ ರೋಗಗಳಿಗೆ ಚಿಕಿತ್ಸೆ ನೀಡಲಾಗುವುದು ಮತ್ತು ನೇತ್ರ ತಪಾಸಣೆ ನಡೆಸಿ ಅರ್ಹರಿಗೆ ಸರ್ಕಾರಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿ ಶಸ್ತ್ರ ಚಿಕಿತ್ಸೆ ಕೈಗೊಂಡು ಕನ್ನಡಕ ವಿತರಿಸಲಾಗುವುದು ಎಂದು ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರೊ. ಶಿವರಾಜ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಳೆದ 18 ವರ್ಷಗಳಿಂದ ನಿರಂತರವಾಗಿ ಸ್ವಾತಂತ್ರ್ಯುತ್ಸವ ಸಂದರ್ಭದಲ್ಲಿ ಬಡವರ ಆರೋಗ್ಯ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಗುತ್ತಿದ್ದು, ಸುತ್ತಮುತ್ತಲಿನ ಬಡಾವಣೆಗಳ ಜನತೆ ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಶಿಬಿರದಲ್ಲಿ ಪಾಲ್ಗೊಂಡು ಸೌಲಭ್ಯ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ನೇತ್ರ ತಜ್ಞರಾದ ದೇವೀಂದ್ರ ಚಿಂಚೋಳಿ, ಶ್ರೀನಿವಾಸ ಚಿಂಚೋಳಿ, ಡಾ. ಉದಯ ಪಾಟೀಲ್, ಶ್ರೀನಿವಾಸ ಪಟವಾರಿ, ಎಲಬು- ಕೀಳು ತಜ್ಞರಾದ ಡಾ. ಕಿಶೋರ ಮೇಂಗಜಿ, ಡಾ. ಸದಾಶಿವ ಜಿಡಗೆಕರ್, ಮಕ್ಕಳ ತಜ್ಞರಾದ ಡಾ. ಎಚ್. ವೀರಭದ್ರಪ್ಪ, ಡಾ. ರಮೇಶ ಯಳಸಂಗಿಕರ್ ಮತ್ತು ಡಾ. ಮೋರೆ ಸೇರಿದಂತೆ 12 ಜನ ವೈದ್ಯರು ಮತ್ತು ಇಬ್ಬರು ಲೋಬರೋಟರಿ ತಜ್ಞರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ಕೈಗೊಳ್ಳಲಿದ್ದಾರೆಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.