ರಾಯಚೂರು

'ನ್ಯಾಯಬೆಲೆ ಅಂಗಡಿ ಸಂಚಾಲಕರಿಗೆ ಬುದ್ಧಿ ಹೇಳಿ'

Published On :

ಸಿಂಧನೂರು: ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಒಂದು ರೂ.ಗೆ ಕೆ.ಜಿ. ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ಮಾಡಿದ್ದರೂ ಅದನ್ನು ಜಾರಿಗೆ ತರದೆ ನ್ಯಾಯಬೆಲೆ ಅಂಗಡಿ ಸಂಚಾಲಕರು ಒಂದು ಕೆ.ಜಿ. ಅಕ್ಕಿಗೆ ಒಂದುವರೆ ರೂಪಾಯಿಯಂತೆ ತೆಗೆದುಕೊಳ್ಳುತ್ತಿದ್ದಾರೆ.
   ಪ್ರತಿಯೊಂದು ಕಾರ್ಡ್‌ಗೆ ಕೇವಲ 25 ಕೆ.ಜಿ. ವಿತರಣೆ ಮಾಡುತ್ತಿದ್ದಾರೆ. ಉದಾಹರಣೆಗೆ ಬೂದಿವಾಳ, ದಢೇಸುಗೂರು, ಗಾಂಧಿನಗರ, ಸಿಎಸ್‌ಎಫ್ ಕ್ಯಾಂಪ್ ನಂ.1 ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಮತ್ತು ಕ್ಯಾಂಪುಗಳಲ್ಲಿ ರಾಜಾರೋಷವಾಗಿ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದು, ತಹಸೀಲ್ದಾರರು ಸೂಕ್ತ ಕ್ರಮಕೈಗೊಳ್ಳುವಂತೆ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಆರೋಗ್ಯಪ್ಪ ಪನ್ನೂರು, ತಾಲೂಕು ಅಧ್ಯಕ್ಷ ಅಳ್ಳಪ್ಪ ಜರಕುಂಟಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.