ರಾಯಚೂರು

ಪಿಡಿಒ ಬ್ಯಾಂಕ್ ಖಾತೆ ಮುಟ್ಟುಗೋಲಿಗೆ ಆಗ್ರಹ

Published On :

ಸಿಂಧನೂರು: ಭ್ರಷ್ಟಾಚಾರ, ಸರ್ಕಾರಿ ಹಣ ದುರುಪಯೋಗ, ಅವ್ಯವಹಾರ ಮುಂತಾದ ಆರೋಪಗಳ ಮೇಲೆ ಅಮಾನತುಗೊಂಡಿರುವ ತಾಲೂಕಿನ ಗುಡದೂರು ಪಿಡಿಒ ಮನೋಹರ ಅವರು ರಾಜಕೀಯ ಪ್ರಭಾವ ಬಳಸಿಕೊಂಡು ಅಧಿಕಾರ ಪಡೆಯಲು ಯತ್ನಿಸುತ್ತಿದ್ದಾರೆ. ಗ್ರಾಪಂ ಎಲ್ಲ ಯೋಜನೆಗಳ ತನಿಖೆ ನಡೆಯುವವರೆಗೆ ಅವರನ್ನು ಸೇವೆಗೆ ತೆಗೆದುಕೊಳ್ಳಬಾರದು. ಅವರ ವೈಯಕ್ತಿಕ ಆಸ್ತಿ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡು ಸೇವೆಯಿಂದ ವಜಾಗೊಳಿಸಬೇಕೆಂದು ಅಖಿಲ ಭಾರತ ದಲಿತ ಮಹಾಸಭಾದ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಸಮಿತಿ ಜಿಲ್ಲಾಧ್ಯಕ್ಷ ಮರಿಸ್ವಾಮಿ ಬಿ.ಹಸಮಕಲ್ ಹಾಗೂ ತಾಲೂಕಾಧ್ಯಕ್ಷ ದುರುಗಪ್ಪ ಹೆಡಗಿನಾಳ ಈ ಕುರಿತು ಹೇಳಿಕೆ ನೀಡಿ, ಕಳೆದ ಎರಡು ವರ್ಷಗಳಿಂದ ಎಸ್‌ಸಿ, ಎಸ್‌ಟಿ ಜನಾಂಗದವರಿಗೆ ಶೇ.22.5 ಬಜೆಟ್‌ನಲ್ಲಿ ಯಾವುದೇ ಕಲ್ಯಾಣ ಕಾರ್ಯಕ್ರಮ ಕೈಗೊಳ್ಳದೆ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. 2010ರಿಂದ 2012 ರವರೆಗೆ ಮಂಜೂರಾದ ಬಿಆರ್‌ಜಿಎಫ್ 2012- 13ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ಎಸಗಿದ್ದಾರೆ. ಪ್ರತಿವರ್ಷ ಶಾಸನಬದ್ಧ ಅನುದಾನವನ್ನು ಕಾನೂನು ಬಾಹಿರವಾಗಿ ಉಪಯೋಗಿಸಿಕೊಳ್ಳಲಾಗಿದೆ. ಅಲ್ಲದೆ ಗ್ರಾಮ ಸ್ವರಾಜ್ ಯೋಜನೆಯಡಿ ಕಾಮಗಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಇಎಂಡಿ ರೂಪದಲ್ಲಿ ಪಂಚಾಯಿತಿಗೆ ಬಂದ ಹಣ ದುರುಪಯೋಗ ಮಾಡಿಕೊಂಡಿದ್ದು ಈ ಎಲ್ಲ ಪ್ರಕರಣಗಳನ್ನು ಸಮಗ್ರ ತನಿಖೆಗೆ ಒಳಪಡಿಸಿ ಕಠಿಣ ಕ್ರಮ ಜರುಗಿಸುವಂತೆ ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.