ಸಹಕಾರಿ ಬ್ಯಾಂಕ್ ಶಾಖೆ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಮುದಗಲ್ ಆ.11
ಗುರು ರಾಮಲಿಂಗೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಮಸ್ಕಿಯ ಮತ್ತೊಂದು ಶಾಖೆಯನ್ನು ಪಟ್ಟಣದಲ್ಲಿ ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು. ಪತ್ತಿನ ಸಹಕಾರಿ ಸೌಹಾರ್ದ ಶಾಖೆ ಹೆಚ್ಚಿನ ಗ್ರಹಕರನ್ನು ಹೊಂದಿ, ಅಭಿವೃದ್ಧಿ ಹೊಂದಲಿ. ಸಾರ್ವಜನಿಕ ಸೇವೆ ಮಾಡುವ ಮೂಲಕ ಅನುಕೂಲ ಒದಗಿಸಿಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರಾಮಲಿಂಗೇಶ್ವರ ಪತ್ತಿನ ಸೌಹಾರ್ದ ನಿಯಮಿತದ ಅಧ್ಯಕ್ಷ ಹಾಲಿ ಮಸ್ಲಿ ಶಾಸಕ ಪ್ರತಾಪಗೌಡ ಪಾಟೀಲ್, ವಿಧಾನಪರಿಷತ್ ಮಾಜಿ ಸದಸ್ಯ ಮನೋಹರ ಮಸ್ಕಿ, ನಿರ್ದೇಶಕರಾದ ಪ್ರಕಾಶ ಮಸ್ಕಿ, ಡಾ. ಗುರುರಾಜ ದೇಶಪಾಂಡೆ, ಬದರಿನಾರಾಯಣ ಗೌರಿಪೂರ, ವೆಂಕಟೇಶ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.
ಬುದ್ಧಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಸಿಂಧನೂರು: ತಾಲೂಕಿನ ಪುನರ್ವಸತಿ ಕ್ಯಾಂಪ್ ನಂ. 2ರ ಶ್ರೀಲೇಖ ವಿಕಾಸ ಬಿಸ್ವಾಸ್ ಎನ್ನುವ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಶ್ರೀಲೇಖ ಪುನರ್ವಸತಿ ಕ್ಯಾಂಪ್ ನಂ. 4ರ ಕಾಲೇಜ್ ಒಂದರಲ್ಲಿ ಅಭ್ಯಾಸ ಮಾಡುತ್ತಿದ್ದು, ವಿದ್ಯಾರ್ಥಿಯೊಬ್ಬನೊಂದಿಗೆ ಪ್ರೀತಿ ಇಟ್ಟುಕೊಂಡಿದ್ದಳೆಂದು ಹೇಳಲಾಗಿದೆ.
ಇದೇ ವಿಷಯವಾಗಿ ಮೇಲಿಂದ ಮೇಲೆ ತಂದೆ-ತಾಯಿ ಬುದ್ಧಿಮಾತು ಹೇಳಿದ್ದರು. ಪ್ರಿಯಕರನೊಂದಿಗೆ ಮಾತನಾಡಿದ್ದಕ್ಕೆ ಪೋಷಕರು ಬೈದಿದ್ದರಿಂದ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಎಂ. ಪಾಟೀಲ್ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

