ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬೆಂಬಲಿಸಿ
ಕನ್ನಡಪ್ರಭ ವಾರ್ತೆ ಮುದಗಲ್ ಆ.12
ಮಸ್ಕಿ ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ನನ್ನ ಮೇಲಿನ ಪ್ರೀತಿ, ವಿಶ್ವಾಸಕ್ಕೆ ಎರಡನೇ ಬಾರಿಗೆ ಶಾಸಕನನ್ನಾಗಿ ಆಯ್ಕೆ ಮಾಡಿದ್ದೀರಿ, ನಿಮಗೆಂದೂ ನಾನು ದ್ರೋಹ ಬಗೆಯಲಾರೆ. ನನ್ನ ಮೇಲಿನ ವಿಶ್ವಾಸಕ್ಕೆ ತಕ್ಕಂತೆ ಮುಂದೆ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕೆಂದು ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಅಭಿವೃದ್ಧಿಗೆ ಆದ್ಯತೆ: ಅವರು ಸಮೀಪದ ಗುಡಿಹಾಳ ಗ್ರಾಮದಲ್ಲಿ ಗ್ರಾಮದ ಮುಸ್ಲಿಂ ನವಜವಾನ್ ಕಮಿಟಿಯವರು ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ, ನಾನು ಆಡಳಿತಾರೂಢ ಶಾಸಕನಾಗಿರುವುದು ಹೆಮ್ಮೆಯ ವಿಷಯಯಾಗಿದೆ. ಹಿಂದಿನ ಸರಕಾರದಲ್ಲಿ ಕೂಡ ಆಡಳಿತಾರೂಢ ಶಾಸಕನಾಗಿದ್ದರಿಂದ ಕ್ಷೇತ್ರಕ್ಕೆ ನೂರಾರು ಕೋಟಿ ರೂ. ಅನುದಾನ ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಈ ಬಾರಿಯೂ ಕೂಡ ನಾನು ಮತ್ತೆ ಆಡಳಿತಾರೂಢ ಸರ್ಕಾರದ ಶಾಸಕನಾಗಿರುವುದರಿಂದ ಕ್ಷೇತ್ರದ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುವೆ.
ರೂಪುರೇಷೆ ಸಿದ್ಧತೆ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸಿ 371 ಜೆ ವಿಧಿಯನ್ನು ಜಾರಿಗೆ ತಂದಿದೆ. ಅದರ ರೂಪುರೇಷೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿವೇಶನದಲ್ಲಿ ಪಾಸ್ ಮಾಡಿ, ಕೇಂದ್ರಕ್ಕೆ ಕಳಿಸಲಾಗಿದೆ. ಶೀಘ್ರದಲ್ಲಿಯೇ ಜಾರಿಗೆ ಬರಲಿದೆ. ಅದರಿಂದ ಹೈಕ ಭಾಗದ ಯುವಕರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ ಮೀಸಲಾತಿ ಒದಗಿ ಬರಲಿದ್ದು ಸಂತಸದ ಸಂಗತಿಯಾಗಿದೆ. ಅದಕ್ಕಾಗಿ ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನ ವಹಿಸಿದ್ದ ಕಾಂಗ್ರೆಸ್ ಮುಖಂಡ ಹಾಗೂ ಹೈಕಹೋ ಸಮಿತಿ ಕಾರ್ಯದರ್ಶಿ ಬಸವಂತರಾಯ ಕುರಿ ಮಾತನಾಡಿದರು. ವೇದಿಕೆ ಮೇಲೆ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ಮುಖಂಡರಾದ ಪಂಪಾಪತಿ ಚುಕನಟ್ಟಿ, ಕರಾರೈ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಶರಣಪ್ಪ ತೆರಿಭಾವಿ, ಯಲ್ಲೋಜಿರಾವ್ ಕೋರೆಕರ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

