ರಸ್ತೆ ಅಭಿವೃದ್ಧಿಗೆ ಶಾಸಕ ಪಾಟೀಲ್ ಚಾಲನೆ
ರಾಯಚೂರು: ನಗರದಲ್ಲಿ ಎಲ್ಲೆಡೆ ಸಿಸಿ ರಸ್ತೆ ನಿರ್ಮಿಸುವುದು ತಮ್ಮ ಆಶಯವಾಗಿದ್ದು, ಮಳೆಗಾಲದ ನಂತರದಲ್ಲಿ ನಗರದ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.
ಅವರು ನಗರದಲ್ಲಿ ಸೋಮವಾರ ಪೂರ್ಣಿಮಾ ಮಂದಿರ ದಿಂದ ಸೈಯದ್ ಇಸಾಖ್ ಆಯಿಲ್ ಮಿಲ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ನಗರದಲ್ಲಿ ರಸ್ತೆಗಳಲ್ಲಿನ ತಗ್ಗುಗಳನ್ನು ವೈಜ್ಞಾನಿಕವಾಗಿ ಮುಚ್ಚಲು ಈಗಾಗಲೇ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರಾದ ಯಲ್ಲಪ್ಪ, ಪವನ್ ಕುಮಾರ್ ಮತ್ತಿತರರಿದ್ದರು.
ಟ್ರ್ಯಾಕ್ಟರ್ ಮಾಲೀಕರಿಂದ ರಾಜ್ಯಪಾಲರಿಗೆ ಮನವಿ
ಯಾದಗಿರಿ: ಜಿಲ್ಲೆಯಲ್ಲಿ ಮರಳು ಮತ್ತು ಮಣ್ಣು ಸಾಗಾಣಿಕೆ ನಿಷೇದ ಹೇರಿರುವದರಿಂದ ಟ್ರಾಕ್ಟರ್ ಮಾಲೀಕರಿಗೆ ಹಾಗೂ ಕಟ್ಟಡ ಮತ್ತು ಕೂಲಿ ಕಾರ್ಮಿಕರಿಗೆ ಇದರಿಂದ ತುಂಬಾ ತೊಂದರೆ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ತಾಲೂಕಿನಲ್ಲಿ ಸುಮಾರು 350ಕ್ಕೂ ಹೆಚ್ಚು ಟ್ರ್ಯಾಕ್ಟರಗಳು ಇದ್ದು ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಸಾಲ ಮಾಡಿಕೊಂಡು, ಹೊಲ, ಮನೆ, ಕಲ್ಲು, ಮಣ್ಣು ಮರಂ ಸಾಗಿಸುವ ಕೆಲಸ ಮಾಡಿಕೊಂಡು ಬಂದ ಹಣದಲ್ಲಿ ಬ್ಯಾಂಕಿನ ಸಾಲ ತೀರಿಸಬೇಕು. ಜೊತೆಯಲ್ಲಿಯೇ ಸಂಸಾರವನ್ನು ನೀಗಿಸಬೇಕು. ಹಾಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಟೆಂಡರ್ ಅಗತ್ಯ: ಜಿಲ್ಲಾದ್ಯಂತ ಮರಳು, ಕಲ್ಲು, ಮಣ್ಣು, ಮರಮ್ ಜಿಲ್ಲೆಯ ನೈಸರ್ಗಿಕ ಸಂಪತ್ತು ಜಿಲ್ಲೆಯ ಅಭಿವೃದ್ಧಿಗೆ ಬಳಸಲು ತಕ್ಷಣ ಅನುವು ಮಾಡಿಕೊಡಬೇಕು. ಸರ್ಕಾರಿ ಹಳ್ಳಗಳನ್ನು ನಿಗದಿಪಡಿಸಿ ಮರಳು ಟೆಂಡರ್ ಶೀಘ್ರದಲ್ಲೇ ಕರೆಯಬೇಕು. ಟ್ರ್ಯಾಕ್ಟರ್ ಮಾಲೀಕರಿಗೆ ಅರಣ್ಯ ಇಲಾಖೆಯಿಂದ, ಪೊಲೀಸ್ ಇಲಾಖೆಯಿಂದ, ಗಣಿ ಇಲಾಖೆಯಿಂದ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ನಿರಂತರ ಕಿರುಕುಳ ಕೊಟ್ಟು ಹಣ ವಸೂಲಿ ಮಾಡುವುದನ್ನು ತಕ್ಷಣ ತಡೆಯಬೇಕು. ರಾಷ್ಟ್ರೀಕೃತ ಬ್ಯಾಂಕಗಳಲ್ಲಿ ಸಾಲ ಪಡೆದ ಟ್ರ್ಯಾಕ್ಟರ್ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಾಲ ಮನ್ನ ಮಾಡಬೇಕು. ರೈತಾಪಿ ಜನತೆ ಟ್ರಾಕ್ಟರ್‌ಗಳ ವಿಮಾ ಹಣ ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಮನವಿ ಮಾಡಿದರು. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ದ್ವಂದ್ವ ನಿಲುವಿನಿಂದ ಟ್ರ್ಯಾಕ್ಟರ್ ಮಾಲೀಕರು ಮತ್ತು ಕೂಲಿ ಕಾರ್ಮಿಕರ ಬದುಕು ಬೀದಿ ಪಾಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

