ದೇಶ ರಕ್ಷಣೆಗೆ ಹೋರಾಟ ಮನೋಭಾವ ಅಗತ್ಯ: ಶಾಸಕ ಬಾದರ್ಲಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಆ.15
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮರ ಆದರ್ಶ ಮೌಲ್ಯಗಳ ಜೊತೆ ಜೊತೆಗೆ ಯುವ ಪ್ರತಿಭಾವಂತರು ದೇಶದ ರಕ್ಷಣೆಗಾಗಿ ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ 67ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿಗೆ ಸ್ವಾತಂತ್ರ್ಯ ದೊರಕಿ 67 ವರ್ಷ ಕಳೆದಿವೆ. ದೇಶ ಬಾಂಧವರು ಈ ದೇಶದ ರಕ್ಷಣೆಗೆ ಶ್ರಮ ಪಡಬೇಕು. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಈ ಎರಡು ಅಂಶಗಳಿಂದ ಪ್ರತಿಯೊಬ್ಬರು ಭವ್ಯ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕು. ನಮ್ಮ ರಾಷ್ಟ್ರದ ಯುವಕರು ಎಲ್ಲ ರಾಷ್ಟ್ರಗಳಿಗಿಂತ ಮುಂದುವರೆದು ರಾಷ್ಟ್ರದ ಕೀರ್ತಿ ಹೆಚ್ಚಿಸಬೇಕಾದರೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು, ಆಗ ಮಾತ್ರ ನಮ್ಮ ಹಕ್ಕು, ಸ್ವಾತಂತ್ರ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಅನಕ್ಷರತೆ ಹೋಗಲಾಡಿಸಿ: ದೇಶದ ಸಂಸ್ಕೃತಿಯನ್ನು ಮಹಿಳೆಯರು ಕಾಪಾಡಬೇಕಾಗಿದೆ. ದೇಶದಲ್ಲಿ ಅನಕ್ಷರಸ್ಥರು ತುಂಬಿ ತುಳುಕುತ್ತಿದ್ದಾರೆ. ಇದನ್ನು ತಡೆಗಟ್ಟಲು ಎಲ್ಲ ಅಧಿಕಾರಿ ವರ್ಗದವರು, ಶಿಕ್ಷಣ ಪ್ರೇಮಿಗಳು ಮುಂದಾಗಬೇಕೆಂದು ಅಭಿಪ್ರಾಯಪಟ್ಟರು.
ಎಲ್ಲರೂ ದೇಶಾಭಿಮಾನ ಬೆಳೆಸಿಕೊಳ್ಳಿ: ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ಹೋರಾಡಿ ಸ್ವಾತಂತ್ರ್ಯ ಗಳಿಸಿದ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ ಹುಟ್ಟಿರುವ ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಗ್ರಾಮೀಣ ಜನರು, ಸರ್ಕಾರದ ಹಲವು ಯೋಜನೆಗಳನ್ನು ಸದಯಪಯೋಗ ಪಡಿಸಿಕೊಳ್ಳುವುದರ ಮೂಲಕ ತಮ್ಮ ಮೂಲಭೂತ ಕರ್ತವ್ಯವನ್ನು ನಿರ್ವಹಿಸಬೇಕೆಂದು ಹೇಳಿದರು.
ಇದೇ ವೇಳೆ ನಗರಸಭೆ ಪೌರಾಯುಕ್ತ ನಾಜೀರ್ ಅಲಿ, ತಾಪಂ ಅಧ್ಯಕ್ಷೆ ಬಸ್ಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಕಾರ್ಯನಿರ್ವಾಹಕ ಅಧಿಕಾರಿ ರಮೇಶ ತಳವಾರ, ಎಪಿಎಂಸಿ ಅಧ್ಯಕ್ಷ ಸಣ್ಣ ಕರಿಯಪ್ಪ, ಉಪಾಧ್ಯಕ್ಷ ರಮೇಶಫ್ಪ ಉಡಾ, ಕ್ಷೇತ್ರ ಶಿಕ್ಷಣಧಿಕಾರಿ ವೃಷಭೇಂದ್ರಯ್ಯ ಸ್ವಾಮಿ, ನಗರಸಭೆ ಸದಸ್ಯರಾದ ಚಂದ್ರಶೇಖರ ಮೈಲಾರ, ಮಹೆಬೂಬ್, ಜಾಫರ್ ಜಾಗೀರದಾರ, ಲಿಂಗರಾಜ ಹೂಗಾರ, ವೆಂಕಟೇಶ ದತ್ತೂರಾವ್ ಬಂಡಿ, ನಾಗಪ್ಪ, ಪಿಎಸ್ಐ ಲಿಂಗಪ್ಪ, ಪಾಟೀಲ್, ಜಿಪಂ ಎಇಇ ಬಿ.ಆರ್. ಗೌಡರ್ ಮತ್ತಿತರರು ಇದ್ದರು.
ಸಮಾಜ ಕಲ್ಯಾಣ ಅಧಿಕಾರಿ ಕೆ.ನಾಗರಾಜ ಸ್ವಾಗತಿಸಿದರು. ವೀರೇಶ ಸಾಲಿಮಠ ಪ್ರಾರ್ಥಿಸಿದರು. ವೀರೇಶ ಗೋನವಾರ ಕಾರ್ಯಕ್ರಮ ನಿರೂಪಿಸಿದರು. ದುರುಗಪ್ಪ ಹಸಮಕಲ್ ವಂದಿಸಿದರು. ನಂತರ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

