ರಾಯಚೂರು

ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಆಗ್ರಹ: ಧರಣಿ

Published On :

ರಾಯಚೂರು: ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜನಾರೋಗ್ಯ ಆಂದೋಲನ- ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಅಹೋರಾತ್ರಿ ಧರಣಿ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿದೆ. ಅದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಖಾಸಗಿಯವರ ಬಳಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆಯುವಂತಾಗಿದೆ ಎಂದು ಆರೋಪಿಸಿದರು.
ಜಿಲ್ಲಾಸ್ಪತ್ರೆಯನ್ನು ಕೂಡಲೇ ಹೊಸ ಆಸ್ಪತ್ರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು. ಮಕ್ಕಳ ಮತ್ತು ಬಾಣಂತಿಯರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಒಪೆಕ್ ಆಸ್ಪತ್ರೆ ಕೂಡಲೇ ಆರಂಭಿಸಬೇಕು. ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ 286 ಸಿಬ್ಬಂದಿಯನ್ನು ಪುನಾ ನೇಮಿಸಬೇಕು. ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಗದಿ ಮಾಡಿರುವ ವ್ಯಾಪ್ತಿಯನ್ನು ಪುನಾ ನಿಗದಿ ಮಾಡಿ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಆಯಾ ಕೇಂದ್ರಗಳ ಸ್ಥಾನದಲ್ಲಿಯೇ ವಾಸಿಸಬೇಕು. ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿಯೇ ರೋಗಿಗಳಿಗೆ ಉಚಿತವಾಗಿ ಔಷಧಿ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಹೋರಾಟಗಾರರು ಒತ್ತಾಯಿಸಿದರು.
ಸಂಘಟನೆಯ ಶ್ರೀರಾಮರೆಡ್ಡಿ, ಜೆ.ಬಿ. ರಾಜು, ವಿಜಯಕುಮಾರ್, ಸುನಂದಮ್ಮ, ನರಸಮ್ಮ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.