ರಾಯಚೂರು

ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Published On :

ಕನ್ನಡಪ್ರಭ ವಾರ್ತೆ ,  ಮಸ್ಕಿ ,  ಆ.16
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಸ್ವ-ಸಹಾಯ ಸಂಘಗಳ 2 ಲಕ್ಷ ಸದಸ್ಯರಿಂದ ಕರ್ನಾಟಕ ರಾಜ್ಯಾದ್ಯಾಂತ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಗುಡದೂರು ವಲಯದ ಮೇಲ್ವಿಚಾರಕ ಚನ್ನಪ್ಪ ಹೇಳಿದರು.
ಅವರು ಸಮೀಪದ ಗುಡದೂರು ಗ್ರಾಮದ ಚನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮಹಿಳಾ ಸ್ವ-ಸಹಾಯ ಗುಂಪುಗಳ ಹಾಗೂ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿ ವೇತನ: ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ. ರಾಜ್ಯದ 22 ಜಿಲ್ಲೆಗಳಲ್ಲಿ ಸಂಸ್ಥೆಯ ಮಹಿಳಾ ಸ್ವ-ಸಹಾಯ ಗುಂಪುಗಳು ರಚನೆಯಾಗಿವೆ. 2.85ಲಕ್ಷ ಸದಸ್ಯರಿದ್ದಾರೆ. ಸುಜ್ಞಾನ ನಿಧಿ ಯೋಜನೆಯಲ್ಲಿ 6750 ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೈಗೊಳ್ಳಲು ಮಾಸಿಕ ರು. 400 ರಿಂದ ರು. 1ಸಾವಿರದವರೆಗೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆಂದರು.
ಗ್ರಾಮೀಣ ಬಡ ಹಾಗೂ ದುರ್ಬಲ ಮಹಿಳೆಯರ ಬದುಕಿಗೆ ಅಗತ್ಯವಾಗಿರುವ ಸರಳ ಸೂತ್ರಗಳನ್ನು ಒಳಗೊಂಡಿರುವ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಸಂಸ್ಥೆಯು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬೇಕೆಂದು ಮನವಿ ಮಾಡಿದರು. ಆರ್‌ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ತಿಮ್ಮನಗೌಡ ಪಾಟೀಲ್ ಗುಡದೂರು ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಅಮರಗುಂಡಪ್ಪ, ಶರಣಪ್ಪ ಸಾಹುಕಾರ, ನಾಗೇಂದ್ರಪ್ಪ ಪತ್ತಾರ, ಬಸನಗೌಡ ಪೊಲೀಸ್ ಪಾಟೀಲ್, ಶರಣಮ್ಮ ಪೊಲೀಸ್ ಪಾಟೀಲ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.