ರಾಯಚೂರು

'ಭ್ರಷ್ಟಾಚಾರ ತೊಲಗಿದಾಗ ಮಾತ್ರ ನಿಜವಾದ ಸ್ವಾತಂತ್ರ್ಯ'

Published On :

ಸಿಂಧನೂರು: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 66 ವರ್ಷ ಗತಿಸಿದರೂ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ಮೊದಲು ಬ್ರಿಟಿಷರು ನಮ್ಮನ್ನು ಆಳುತ್ತಿದ್ದರು. ಆದರೆ ಈಗ ಭ್ರಷ್ಟಾಚಾರ ನಮ್ಮನ್ನು ಆಳುತ್ತಿದೆ. ಭ್ರಷ್ಟಾಚಾರ ತೊಲಗಿದರೆ ಮಾತ್ರ ನಿಜವಾದ ಸ್ವಾತಂತ್ರ್ಯ ಲಭ್ಯವಾಗುತ್ತದೆ ಎಂದು ಮೀನಾಕ್ಷಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ಯಾಮಸುಂದರ್ ಕೀರ್ತಿ ಹೇಳಿದರು.
ನಗರದ ಆದರ್ಶ ಕಾಲೋನಿಯ ಮೀನಾಕ್ಷಿ ಪಬ್ಲಿಕ್ ಸ್ಕೂಲ್‌ನಲ್ಲಿ 67ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೇವಲ ಬ್ರಿಟಿಷರಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಭ್ರಷ್ಟಾಚಾರವನ್ನು ತೊಲಗಿಸಲು ಮತ್ತು ನಿಜವಾದ ಸ್ವಾತಂತ್ರ್ಯವನ್ನು ಪಡೆಯಲು ಇಂದಿನ ಯುವಕರು ಪಣ ತೊಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಖಜಾಂಚಿ ಲಕ್ಷ್ಮೀದೇವಿ ಕೀರ್ತಿ, ಆಡಳಿತಾಧಿಕಾರಿ ಚಂದ್ರಕಲಾ ಪ್ರಕಾಶ್, ಶರಬನಗೌಡ, ಮಹಾಂತೇಶ ಕಂದಕೂರು, ಮುಖ್ಯೋಪಾಧ್ಯಾಯಿನಿ ರಂಜಿತಾ ರಾಜೇಶ, ಉಪನ್ಯಾಸಕರಾದ ಸೋಮನಗೌಡ ಪಾಟೀಲ್ ಹಾಗೂ ಪಾಲಕರು ಪಾಲ್ಗೊಂಡಿದ್ದರು. ಶಿಕ್ಷಕಿ ಲಕ್ಷ್ಮಿ ಸ್ವಾತಂತ್ರ್ಯದ ಬಗ್ಗೆ ಭಾಷಣ ಮಾಡಿದರು. ವಿದ್ಯಾರ್ಥಿನಿ ಶ್ರೀದೇವಿ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಜವಳಗೇರಾ ಕಾರ್ಯಕ್ರಮ ನಡೆಸಿಕೊಟ್ಟರು. ಸಾವಿತ್ರಿ ವಂದಿಸಿದರು. ಮಕ್ಕಳ ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.