ಸ್ವಾತಂತ್ರ್ಯ ಸಂಭ್ರಮಾಚರಣೆ
ಕನ್ನಡಪ್ರಭ ವಾರ್ತೆ ರಾಯಚೂರು ಆ.17
ನ್ಯಾಯಮೂರ್ತಿ ರಾಜೇಂದ್ರಕುಮಾರ್ ಸಾಚಾರ್ ವರದಿ ಸಂಪೂರ್ಣ ಜಾರಿಗೆ ಒತ್ತಾಯಿಸಿ ನಗರದಲ್ಲಿ ಶನಿವಾರ ಜನಸಂಗ್ರಾಮ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮಹಿಳಾ ಸಮಾಜದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಮನವಿ ಸಲ್ಲಿಸಿ, ಪ್ರಜಾಪ್ರಭುತ್ವದ ಬಲವರ್ಧನೆಯೇ ಜನಸಮುದಾಯಗಳ ಬಲವರ್ಧನೆಯಾಗಿದೆ. ಇಂಥ ವಿಚಾರವನ್ನು ಸಾಚಾರ್ ಅವರು ನೀಡಿದ ವರದಿ ಹೇಳಿದೆ ಎಂದು ತಿಳಿಸಿದರು.
ಮುಸ್ಲಿಮರ ಏಳ್ಗೆಗೆ ಮುಂದಾಗುತ್ತಿಲ್ಲ: ಮುಸ್ಲಿಂ ಸಮಾಜದವರನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸಲಾಗುತ್ತಿದೆ. ಅವರೂ ಈ ದೇಶದ ಪ್ರಜೆಗಳು ಎಂಬ ಭಾವನೆ ರಾಜಕೀಯ ಪಕ್ಷಗಳಿಗಿಲ್ಲವಾಗಿದೆ. ಸಮುದಾಯವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಮುಸ್ಲಿಂ ಸಮಾಜದ ಪ್ರಗತಿಗೆ ಆಳುವವರು ಯೋಚಿಸುತ್ತಿಲ್ಲ ಎಂದು ಟೀಕಿಸಿದರು.
ದೇಶದ ಒಟ್ಟು ಜನಸಂಖ್ಯೆಯ ಶೇ.15ರಷ್ಟಿರುವ ಮುಸ್ಲಿಂ ಸಮಾಜದವರಿಗೆ ಜನಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜು, ಉನ್ನತ ಶಿಕ್ಷಣದಲ್ಲಿ ಪ್ರವೇಶ ಸಿಗುತ್ತಿಲ್ಲ. ವಸತಿ ನಿಲಯಗಳು, ವಿದ್ಯಾರ್ಥಿ ವೇತನ ಸೌಕರ್ಯದಿಂದ ಸಮುದಾಯದವರು ವಂಚಿತರಾಗುತ್ತಿದ್ದಾರೆಂದು ಆರೋಪಿಸಿದರು.
ಉದ್ಯೋಗ ಪಡೆಯುವಲ್ಲೂ ಅನ್ಯಾಯ: ಸರ್ಕಾರಿ ಉದ್ಯೋಗ ಮತ್ತು ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ ಮುಸ್ಲಿಂ ಸಮುದಾಯದವರಿಗೆ ದೊರೆಯುತ್ತಿಲ್ಲ. ಇಂಥ ಅನ್ಯಾಯವನ್ನು ಸಹಿಸಿಕೊಂಡಿರುವ ಸಮಾಜದವರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸವಲತ್ತುಗಳನ್ನು ಒದಗಿಸಲು ಶಿಫಾರಸು ಮಾಡಿರುವ ನ್ಯಾಯಮೂರ್ತಿ ರಾಜೇಂದ್ರ ಕುಮಾರ್ ಸಾಚಾರ್ ಅವರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಮುಸ್ಲಿಂ ಸಮುದಾಯವರ ಹಿಂದುಳಿಯುವಿಕೆಯ ಬಗ್ಗೆ ಅಂಕಿ- ಅಂಶಗಳೊಂದಿಗೆ ಸಾಚಾರ್ ಕಮಿಟಿಯ ಶಿಫಾರಸಿನಲ್ಲಿ ತಿಳಿಸಲಾಗಿದೆ. ಭಾರತದ ಮುಸಲ್ಮಾನರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು ಅವರನ್ನು ಮೇಲೆತ್ತದೇ ಕಲ್ಯಾಣ ಭಾರತವನ್ನು ನಿರ್ಮಿಸಲಾಗದು ಎಂಬುದನ್ನು ವರದಿ ಹೇಳಿದೆ ಎಂದು ತಿಳಿಸಿದರು.
ಗಾಂಧೀಜಿ ಹೇಳಿಕೆಗೆ ಸರ್ಕಾರ ತದ್ವಿರುದ್ಧ: ಕೇಂದ್ರ ಸರ್ಕಾರಕ್ಕೆ ಸಾಚಾರ್ ಅವರು ವರದಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ವರದಿಯನ್ನು ಒಪ್ಪಿದೆ ಎಂದು ಹೇಳಿಕೆ ನೀಡುತ್ತಿದೆ. ಆದರೆ ವರದಿಯಲ್ಲಿನ ಶಿಫಾರಸು ಜಾರಿ ನಿಟ್ಟಿನಲ್ಲಿ ದಿವ್ಯ ನಿರ್ಲಕ್ಷ್ಯ ತಾಳಿದೆ. ದೇಶದಲ್ಲಿ ಅಲ್ಪಸಂಖ್ಯಾತರನ್ನು ಹೇಗೆ ದೇಶ ನಡೆಸಿಕೊಳ್ಳುತ್ತದೆ ಎಂಬುದರ ಮೇಲೆ ಆ ದೇಶದ ಪ್ರಜಾಪ್ರಭುತ್ವದ ಗುಣಮಟ್ಟ ನಿರ್ಧಾರವಾಗುತ್ತದೆ ಎಂದು ಗಾಂಧೀಜಿ ಹೇಳಿದ್ದು, ಅದಕ್ಕೆ ವಿರುದ್ಧವಾಗಿ ಕೇಂದ್ರ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.
ಮುಸ್ಲಿಂ ಸಮುದಾಯವು ದೇಶದ ಪ್ರಗತಿಯಲ್ಲಿ ತನ್ನದೇ ಆದ ರೀತಿಯಲ್ಲಿ ಸಾಕಷ್ಟು ಕೊಡುಗೆ ನೀಡಿದೆ. ಹೀಗಾಗಿ ಪ್ರಗತಿಯಲ್ಲಿ ಪಾಲು ಕೇಳುತ್ತಿದ್ದು, ಸೈಯದ್ ಇಮ್ತಿಯಾಜ್, ಎಂ.ಕೆ. ಬೇಗ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

