ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಅವಶ್ಯ
ಸುರಪುರ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಕ್ಷಿಣ ಭಾರತದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಸುರಪುರ ಸಂಸ್ಥಾನದ ಅರಸ ನಾಲ್ವಡಿ ರಾಜಾ ವೆಂಕಟಪ್ಪನಾಯಕ, ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡುವುದು ಅವಶ್ಯವಾಗಿದೆ ಎಂದು ಹರಿರಾವು ಆದೋನಿ ಹೇಳಿದರು.
ಇಲ್ಲಿಯ ಹಸನಾಪೂರ ಹತ್ತಿರದ ವೃತ್ತದಲ್ಲಿ ಸಾತಂತ್ರ್ಯ ಸೇನಾನಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕರ ಪುತ್ಥಳಿ ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ನಡೆದ ಧ್ವಜಾರೋಹಣದಲ್ಲಿ ಪಾಲ್ಗೊಂಡು ಮಾತನಾಡಿದರು.
ದಾಸ್ಯದ ಸಂಕೋಲೆಯಿಂದ ಹೊರಬರಲು ಸಹಸ್ರಾರು ಯೋಧರ ತ್ಯಾಗ, ಬಲಿದಾನಗಳು ನಡೆದಿರುವುದನ್ನು ಯಾರೂ ಮರೆಯಬಾರದು. ದೇಶಭಕ್ತರನ್ನು ನಾವು ಸ್ಮರಿಸಿ ಬಾಳಬೇಕಾಗಿದೆ ಎಂದರು.
ಋಣಿ: ಧ್ವಜಾರೋಹಣ ನೆರವೇರಿಸಿದ ಸಂಸ್ಥಾನದ ಯುವರಾಜ ರಾಜಾ ಕೃಷ್ಟಪ್ಪನಾಯಕ ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಸುರಪುರ ಸಂಸ್ಥಾನಿಕ ಅರಸರು ಎನ್ನುವ ಬಗ್ಗೆ ಗೌರವ ಹೊಂದಿರುವ ಸಮಸ್ತ ಜನತೆಗೆ ನಾವು ಋಣಿಯಾಗಿದ್ದೇವೆ. ನಮ್ಮ ಪೂರ್ವಜರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ನಮ್ಮ ಹಿರಿಯರ ಘನತೆ ಗೌರವವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇಲ್ಲಿಯ ಅರಸರ ಶೂರತ್ವ, ಶೌರ್ಯದ ಬಗ್ಗೆ ಮಕ್ಕಳಿಗೆ ತಿಳಿಸುವ ಕೆಲಸವಾಗಬೇಕು ಮತ್ತು ಪ್ರತಿ ವರ್ಷ ಅವರ ಸ್ಮರಣಾರ್ಥವಾಗಿ ನಡೆಯುವ ದ್ವಜಾರೋಹಣದಲ್ಲಿ ಮಕ್ಕಳು ಪಾಲ್ಗೊಳಬೇಕು. ರಾಷ್ಟ್ರವನ್ನು ಮತ್ತು ರಾಷ್ಟ್ರಧ್ವಜವನ್ನು ಗೌರವಿಸಿ ದೇಶದ ಪ್ರಗತಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಕರೆ ನೀಡಿದರು.
ನಾಲ್ವಡಿ ರಾಜಾ ವೆಂಕಟಪ್ಪನಾಯಕರಿಗೆ ಜಯವಾಗಲಿ ಎಂಬ ಘೋಷಣೆಗಳು ಮುಗಿಲು ಮುಟ್ಟಿತು. ಯುವರಾಜ ರಾಜಾ ಲಕ್ಷ್ಮಿನಾರಾಯಣ ನಾಯಕ, ರಾಜಾ ಕೃಷ್ಣದೇವರಾವ್ ನಾಯಕ, ಮುದ್ದಣ್ಣ ಸರಪಟ್ಟಣ ಶೆಟ್ಟರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

