ರಾಯಚೂರು

21ರಿಂದ ರಾಯರ ಆರಾಧನೆ ಆರಂಭ

Published On :

ಸಿಂಧನೂರು:  ತಾಲೂಕಿನ ತುರ್ವಿಹಾಳ ಗ್ರಾಮದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ 342ನೇ ಗುರುರಾಯರ ಆರಾಧನಾ ಮಹೋತ್ಸವವನ್ನು ಆ.21ರಿಂದ ಆರಂಭಿಸಲಾಗುವುದು ಎಂದು ಗುರುರಾಜ ಸೇವಾ ಸಮಿತಿಯ ಕಾರ್ಯದರ್ಶಿ ಅನಂತರಾವ್ ಕುಲಕರ್ಣಿ ದಢೇಸುಗೂರು ತಿಳಿಸಿದ್ದಾರೆ.  21ರಿಂದ 23ರವರೆಗೆ ಮೂರು ದಿನಗಳ ಕಾಲ ರಾಯರ ಆರಾಧನೆ ನಡೆಯುವುದು. ಪ್ರತಿದಿನ ಬೆಳಗ್ಗೆ ಸುಪ್ರಭಾತ, ದೇವರನಾಮಗಳು, ಶ್ರೀರಾಯರ ಅಷ್ಟೋತ್ತರ, ಪಂಚಾಮೃತಾಭಿಷೇಕ, ಉತ್ತರಾರಾಧನೆಯಂದು ರಥೋತ್ಸವ, ಮಧ್ಯಾಹ್ನ ನೈವೇದ್ಯ, ಅಸ್ತೋದಕ, ಅನ್ನಸಂತರ್ಪಣೆ, ತೀರ್ಥ ಪ್ರಸಾದ, ಸಂಜೆ ಭಜನೆ, ಮಹಾಮಂಗಳಾರತಿ, ಉಪನ್ಯಾಸ, ಸಂಗೀತ ಜರುಗಲಿವೆ.


ನೇಣಿಗೆ ಮಹಿಳೆ ಶರಣು
ರಾಯಚೂರು: ಲಿಂಗಸ್ಗೂರು ತಾಲೂಕಿನ ಜಾಂತಾಪುರ ಗ್ರಾಮದಲ್ಲಿ ಮಹಿಳೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಶರಣಮ್ಮ(35) ಎಂದು ಗುರುತಿಸಲಾಗಿದೆ. ಈಕೆ  ತನ್ನ ಹೊಲದ ಬದುವಿನಲ್ಲಿರುವ ಮಾವಿನ ಮರಕ್ಕೆ ಉಟ್ಟಿದ್ದ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಅನೈತಿಕ ಸಂಬಂಧ; ವ್ಯಕ್ತಿ ಕೊಲೆ
ರಾಯಚೂರು: ತಾಲೂಕಿನ ಕಟ್ಲಟ್ಕೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಅನೈತಿಕ ಸಂಬಂಧಕ್ಕೆ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ. ಮೃತನನ್ನು ಪಾಂಡಪ್ಪ ಎಂದು ಗುರುತಿಸಲಾಗಿದೆ. ಈತನ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿರಿಸಿ ಕೊಂಡಿದ್ದು, ಅದಕ್ಕೆ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಈತನನ್ನು ಕೊಲೆಗೈಯ್ಯಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.