ಇಂದು ಸಿಂಧನೂರು ಬಂದ್ಗೆ ಕರೆ
ಸಿಂಧನೂರು: ಸಿಂಧನೂರು ತಾಲೂಕಿನ ಚಿಕ್ಕಕಡಬೂರಿನ ಮಾದಿಗ ಜನಾಂಗದವರ ಮೇಲೆ ದೌರ್ಜನ್ಯ ಮಾಡಿದ ಘಟನೆ ಖಂಡಿಸಿ ಮಾದಿಗ ದಂಡೋರ, ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ದಲಿತ ಪ್ರಗತಿಪರ ಸಂಘಟನೆಗಳ ಸಂಯುಕ್ತ ವೇದಿಕೆಯಿಂದ ಆ.19 ರಂದು ಸಿಂಧನೂರ ಬಂದ್ಗೆ ಕರೆ ನೀಡಲಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಬಿ.ನರಸಪ್ಪ ಚಿಕ್ಕಕಡಬೂರ ಗ್ರಾಮದಲ್ಲಿ ಮಾದಿಗ ಜನಾಂಗದವರ ಮೇಲೆ ದೌರ್ಜನ್ಯವೆಸಗಿದ 74 ಆರೋಪಿಗಳನ್ನು ಗುಂಡಾ ಕಾಯ್ದೆಯಡಿ ಬಂಧಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸಿಂಧನೂರ ಬಂದ್ ಹಾಗೂ ಪ್ರತಿಭಟನಾ ಕಾರ್ಯಕ್ರಮಕ್ಕೆ ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು, ಶಾಲಾ-ಕಾಲೇಜುಗಳ ಆಡಳಿತ ಮಂಡಳಿ, ಸಣ್ಣ ಪುಟ್ಟ ವ್ಯಾಪಾರಸ್ಥರು, ಸಾರಿಗೆ ಇಲಾಖೆ, ಪೆಟ್ರೋಲಲ್ಬಂಕ್, ಚಿತ್ರಮಂದಿರ, ಖಾಸಗಿ, ಅರೆ ಸರ್ಕಾರಿ ಸಂಸ್ಥೆಗಳು ಬಂದ್ ಮಾಡಿ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಕೋರಿದ್ದಾರೆ.
ಕ್ರೀಡಾಂಗಣ ನಿರ್ಮಾಣಕ್ಕೆ ಆಗ್ರಹ
ರಾಯಚೂರು: ನಗರದ ಶಿಥಿಲಾವಸ್ಥೆಯಲ್ಲಿರುವ ಜಿಲ್ಲಾ ಕ್ರೀಡಾಂಗಣವನ್ನು ಸುಸಜ್ಜಿತಗೊಳಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ರಾಯಚೂರು ಜಿಲ್ಲಾ ಕ್ರೀಡಾ ಅಸೋಸಿಯೇಶನ್ ಒತ್ತಾಯಿಸಿದೆ. ಈ ಕುರಿತು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ ಸಂಘದ ಕಾರ್ಯಕರ್ತರು, ಸದ್ಯ ಜಿಲ್ಲಾ ಕ್ರೀಡಾಂಗಣ ಶಿಥಿಲಾವಸ್ಥೆಯಲ್ಲಿದ್ದು ಅದರಿಂದ ಆತಂಕದಲ್ಲಿಯೇ ಸ್ವಾತಂತ್ರ್ಯೋತ್ಸವ, ಕ್ರೀಡಾಕೂಟಗಳನ್ನು ಆಯೋಜಿಸುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ 22 ಕೋಟಿ ವೆಚ್ಚದ ಸರಳ ಅಂದಾಜು ಪಟ್ಟಿಗೆ ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಒತ್ತಾಯಿಸಿರುವ ಅವರು ಈ ಮೂಲಕ ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರವೀಂದ್ರ ಜಲ್ದಾರ್ ಸೇರಿ ಅನೇಕರಿದ್ದರು.
23ರಂದು ಜಿಲ್ಲಾ ಸಮ್ಮೇಳನ
ರಾಯಚೂರು: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ನ 3ನೇ ಜಿಲ್ಲಾ ಯುವ ಸಮ್ಮೇಳನವನ್ನು ಆ.23ರಂದು ಆಯೋಜಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಪ್ರಮುಖ ವೆಂಕಟರೆಡ್ಡಿ, ಅಂದು ಬೆಳಗ್ಗೆ 11ಕ್ಕೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸ್ಪಂದನ ಸಭಾ ಭವನದಲ್ಲಿ ಸಮ್ಮೇಳನ ಆಯೋಜಿಸಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ್ ಮಸ್ಕಿ ಸಮ್ಮೇಳನ ಉದ್ಘಾಟಿಸಲಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

