ಕ್ರೀಡೆಯಿಂದ ಉತ್ತಮ ಆರೋಗ್ಯ: ಶಂಕರ ಸೋನಾರ
ಗುರುಮಠಕಲ್: ಮಕ್ಕಳು ಸದೃಢರಾಗಿ ಬೆಳೆದು ಉತ್ತಮ ಆರೋಗ್ಯ ಪಡೆಯಬೇಕಾದರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶಂಕರ ಸೋನಾರ ಹೇಳಿದರು. ಪಟ್ಟಣದ ಜವಾಹರಲಾಲ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ನಗರ ಪ್ರದೇಶದ ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದ ಭವಿಷ್ಯ ಇಂದಿನ ಯುವ ಪೀಳಿಗೆಯ ಮೇಲೆ ಅವಲಂಬಿಸಿದೆ. ಅಂತಹ ಮಕ್ಕಳು ಸದೃಢವಾಗಿರಲು ಕ್ರೀಡೆಗಳಲ್ಲಿ ಭಾಗವಹಿಸುವುದು ಅತ್ಯಂತ ಅವಶ್ಯಕ. ಒಲಿಂಪಿಕ್ನಂಥ ಕ್ರೀಡಾಕೂಟಗಳಲ್ಲಿ ದೇಶದ ಸಾಧನೆ ಸಾಲದು. ಆದ್ದರಿಂದ ಕ್ರೀಡಾಪಟುಗಳನ್ನು ಗುರುತಿಸಿ ಅಗತ್ಯ ತರಬೇತಿ ಹಾಗೂ ಸೌಲಭ್ಯ ನೀಡಿ ಪ್ರತಿಭೆಗಳನ್ನು ಬೆಳೆಸುವುದು ಅಗತ್ಯ ಎಂದು ಹೇಳಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಲಕ್ಷ್ಮಿ ಚಂಡರಕಿ ಧ್ಯಜಾರೋಹಣ ನೆರವೇರಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ವಲಯ ಶಿಕ್ಷಣ ಸಂಯೋಜಕ ದೇವಿಂದ್ರಪ್ಪ, ಬುಡಪ್ಪ, ಆನಿಲಕುಮಾರ, ಶರಣಪ್ಪ ಇತರರು ಇದ್ದರು. ನಂತರ ಸ್ಪರ್ಧೆಗಳು ನಡೆದವು.
ಇಂದು ದೇವರಾಜ ಅರಸು ಜಯಂತಿ
ಯಾದಗಿರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸ್ ಅವರ 98ನೇ ಜನ್ಮ ದಿನಾಚರಣೆಯನ್ನು ಆ.20 ರಂದು ಬೆಳಗ್ಗೆ 11 ಗಂಟೆಗೆ ನಗರದ ಗೋಟ್ಲಾ ಬಿಲ್ಡಿಂಗ್ನಲ್ಲಿ ಆಚರಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ್ ಕಾರ್ಯಕ್ರಮ ಉದ್ಫಾಟಿಸುವರು. ಶಾಸಕ ಡಾ. ಎ.ಬಿ. ಮಾಲಕರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷ ಶರಣಿಕಕುಮಾರ್ ದೋಖಾ, ಲೋಕಸಭಾ ಸದಸ್ಯ ಎಸ್. ಫಕೀರಪ್ಪ, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ತಾಲೂಕು ಪಂಚಾಯಿತಿ ಅಧ್ಯಕ್ಷ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಿರೇವಡಗೇರಾ ಶಾಲೆಯ ಪ್ರಾಂಶುಪಾಲ ಸುರೇಶ ತಡಬಿಡಿ ಉಪನ್ಯಾಸ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

