ರಾಯಚೂರು

ಪ್ರೌಢಶಾಲೆಗಳ ಕೊಠಡಿ ಸಮಸ್ಯೆ ನಿವಾರಣೆಗೆ ಆದ್ಯತೆ

Published On :

ಮುದಗಲ್:ಮಸ್ಕಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳಲ್ಲಿ ಕೊಠಡಿ ಸಮಸ್ಯೆ ನಿವಾರಣೆ ಮಾಡುವುಗಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಸಮೀಪದ ತಲೇಖಾನ ಗ್ರಾಮದ ಸರಕಾರಿ ಪ್ರೌಢಶಾಲೆಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಯೋಜನೆಯಡಿ ಮಂಜೂರಾದ ನೂತನ ಕೊಠಡಿಗಳ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದರು.  2009ರಲ್ಲಿ ಜಾರಿಗೆ ಬಂದ ಶಿಕ್ಷಾ ಅಭಿಯಾನ ಯೋಜನೆಯಡಿ ಮಸ್ಕಿ ಕ್ಷೇತ್ರಕ್ಕೆ 5 ಹೊಸ ಪ್ರೌಢಶಾಲೆಗಳಿಗೆ ತಲಾ 10 ಕೊಠಡಿ, 7 ಪ್ರೌಢಶಾಲೆಗಳಿಗೆ ತಲಾ 7 ಕೊಠಡಿಯಂತೆ ಮಂಜೂರಾಗಿದ್ದು, ಉಳಿದ ಪ್ರೌಢಶಾಲೆಗಳಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ಅನುದಾನ ಮೀಸಲಿರಿಸುವ ಮೂಲಕ ಕ್ಷೇತ್ರದ ಎಲ್ಲಾ ಪ್ರೌಢಶಾಲೆಗಳ ಕೊಠಡಿಗಳ ಕೊರತೆ ನೀಗಿಸುವುದರ ಜೊತೆಗೆ ಮೂಲ ಸೌಕರ್ಯ ಒದಗಿಸಿ ಮಸ್ಕಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಆಸೆ ಹೊಂದಿದ್ದೆನೆಂದರು.
ಗುಣಮಟ್ಟದ ಶಿಕ್ಷಣ: ಜಿ.ಪಂ. ಸದಸ್ಯ ಮಹುನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗುಣಮಟ್ಟದ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಜೀವನದಲ್ಲಿ ಮುಂದೆ ಬರಬೇಕೆಂದು ಸಲಹೆ ನೀಡಿದರು.  ಕಾರ್ಯಕ್ರಮದಲ್ಲಿ 2012-13ನೇ ಸಾಲಿನ ಎಸ್ಎಲ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಬಂದ ವಿದ್ಯಾರ್ಥಿಗೆ ಹಾಗೂ ರಾಜ್ಯ ಮಟ್ಟದ ವಿಜ್ಞಾನ ಪರೀಕ್ಷೆಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ಶಾಸಕರು ವಿತರಿಸಿ ವಿದ್ಯಾರ್ಥಿಗಳಿಗೆ ಶುಭ ಕೊರಿದರು.
ಸನ್ಮಾನ: 2ನೇ ಅವಧಿಗೆ ಶಾಸಕರಾಗಿ ಆಯ್ಕೆಯಾದ ಪ್ರತಾಪಗೌಡ ಪಾಟೀಲ್ರನ್ನು ಶಾಲೆ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಹನುಮಂತಪ್ಪ ನಾಯ್ಕ ವಹಿಸಿದ್ದರು. ತಾ.ಪಂ.ಸದಸ್ಯ ತಿಮ್ಮಣ್ಣ ನಾಯ್ಕ, ಭೀಮನಗೌಡ ಪೊಲೀಸ ಪಾಟೀಲ್, ಶಿವು ಕುಮಾರ ಮಸ್ಕಿ, ವಿರೇಶ ನಾಗರಬೆಂಚಿ, ಬಸಲಿಂಗಪ್ಪ ಗೌಡ, ಪಂಪಣ್ಣ ಸಾಹುಕಾರ, ಮೇದಿಕಿನಾಳ ಮುಖ್ಯಶಿಕ್ಷಕ ರಂಗಪ್ಪ, ಅಕ್ಕಮ್ಮ, ವನಮಾಲಾ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ ನಾಯಕ, ಹನುಮಂತಪ್ಪ ಬಾಲದಂಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.