ರಾಯಚೂರು

ಕಾಡು ಹಂದಿ ದಾಳಿ: ವಿದ್ಯಾರ್ಥಿನಿಗೆ ಗಾಯ

Published On :

ಮುದಗಲ್: ತಾಯಿಯೊಂದಿಗೆ ಜಮೀನಿಗೆ ಹೋದ ಮಂಜುಳಾ ತಂ. ಲಿಂಬಪ್ಪ (12) ಎಂಬಾಕೆ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಭಾನುವಾರ ಹಡಗಲಿ ತಾಂಡಾದಲ್ಲಿ ನಡೆದಿದೆ.
ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಮುದಗಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಹೆಚ್ಚಿನ ಚಿಕಿತ್ಸೆ ನೀಡಲಾಯಿತು. ಬೆನ್ನು ಮತ್ತು ತೊಡೆ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ತೀವ್ರ ಅಸ್ವಸ್ಥಳಾಗಿದ್ದಾಳೆ ಎಂದು ತಂದೆ ಲಿಂಬಪ್ಪ ತಿಳಿಸಿದ್ದಾರೆ.
ಚಿಕಿತ್ಸೆ ನೀಡಿದ ಡಾ. ಈಶ್ವರ ಸವಡಿ ಬಾಲಕಿ ಪ್ರಾಣಕ್ಕೆ ಅಪಾಯವಿಲ್ಲ. ತೊಡೆಗೆ ಗಾಯವಾಗಿರುವುದರಿಂದ ಚಿಕಿತ್ಸೆ ಗುಣವಾಗಲಿದೆ ಎಂದು ಭರವಸೆ ನೀಡಿದ್ದಾರೆ.
ಹಡಗಲಿ ತಾಂಡಾದ ಸುತ್ತಮುತ್ತ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶವಿದೆ. ಇದರಿಂದಗಆಗಾಗ್ಗೆ ಜನರ ಮೇಲೆ ಕಾಡು ಹಂದಿಗಳು ಆಗಾಗ ದಾಳಿ ಮಾಡುತ್ತಿವೆ.
ಜಮೀನಿನಲ್ಲಿದ್ದ ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ಆತಂಕಗೊಂಡ ಗ್ರಾಮಸ್ಥರು ಕಾಡು ಪ್ರಾಣಿಗಳಿಂದ ರಕ್ಷಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.