ರಾಯಚೂರು

ಅತಿಥಿ ಉಪನ್ಯಾಸಕರ ವೇತನ ಬಾಕಿ: ಆಯುಕ್ತರಿಗೆ ದೂರು

Published On :

ದೇವದುರ್ಗ; ಪಟ್ಟಣದ ಮುರಿಗೆಪ್ಪ ಖೇಣೇದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುತ್ತಿಲ್ಲ ಎಂದು ವಿಕಲಚೇತನ ಅತಿಥಿ ಉಪನ್ಯಾಸಕ ದೇವಪ್ಪ ಬಿ.ಗಣೇಕಲ್ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನ ಕಾಲೇಜು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ)ಗೆ ಪತ್ರ ಬರೆದಿದ್ದು, 2012-13ನೇ ಸಾಲಿನಲ್ಲಿ ಇಂಗ್ಲೀಷ್ ಭಾಷೆಯ ಅತಿಥಿ ಉಪನ್ಯಾಸಕನಾಗಿ ನೇಮಕಗೊಂಡಿರುವ ತಮಗೆ ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿಸಿಕೊಂಡಿದ್ದರೂ, ವೇತನ ನೀಡಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯರು ವಿಳಂಬ ಮಾಡುತ್ತಿದ್ದಾರೆಂದು ದೂರಿದ್ದಾರೆ.
ವೇತನ ನೀಡುವಂತೆ ವಿಚಾರಿಸಿದಾಗಲೆಲ್ಲ ಅತಿಥಿ ಉಪನ್ಯಾಸಕರ ಪಟ್ಟಿಗೆ ಮೇಲಧಿಕಾರಿಗಳಿಂದ ಅನುಮೋದನೆ ದೊರೆತಿಲ್ಲ ಎಂಬ ಕಾರಣ ಹೇಳಲಾಗಿದೆ. ವೇತನ ದೊರೆಯದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಕೂಡಲೇ ಅಧಿಕಾರಿಗಳು ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.