ನೌಕರರ ಸಂಘದ ಅಧ್ಯಕ್ಷರ ವರ್ಗಾವಣೆ: ಧರಣಿ
ಕ.ಪ್ರ.ವಾರ್ತೆ ರಾಯಚೂರು ಆ.20
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಅವರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾಕ್ಕೆ ವರ್ಗಾವಣೆ ಮಾಡಿದ ಪಶುಸಂಗೋಪನೆ ಇಲಾಖೆ ಆಯುಕ್ತರ ಕ್ರಮ ಸಂಘಟನೆ ವಿರೋಧಿಯಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಸಾಂಕೇತಿಕ ಧರಣಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಶ್ರಮಿಸಿದ್ದಾರೆಂದು ತಿಳಿಸಿದರು.
2013-18ರ ಅವಧಿಗೆ ಈಚೆಗಷ್ಟೇ ನಡೆದ ಜಿಲ್ಲಾ ಸಂಘದ ಚುನಾವಣೆಯಲ್ಲಿ ಮಹೆಬೂಬ್ ಪಾಷಾ ಮೂಲಿಮನಿ ಅವರು ಪುನರಾಯ್ಕೆಯಾಗಿದ್ದಾರೆ. ಆದರೆ, ರಾಜ್ಯ ಪಶುಸಂಗೋಪನೆ ಇಲಾಖೆಯ ಆಯುಕ್ತರು ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಪಶು ಆಸ್ಪತ್ರೆಗೆ ಮೂಲಿಮನಿ ಅವರನ್ನು ದಿಢೀರ್ ವರ್ಗಾಯಿಸಿದ್ದಾರೆಂದು ಆರೋಪಿಸಿದ್ದಾರೆ.
ಮೂಲಿಮನಿ ಅವರನ್ನು ದಿಢೀರ್ ವರ್ಗಾಯಿಸಿರುವ ಪಶು ಸಂಗೋಪನಾ ಇಲಾಖೆಯ ಆಯುಕ್ತರ ಕ್ರಮ ಸರಿಯಲ್ಲ. ಸಂಘಟ ನೆಗೆ ಧಕ್ಕೆಯುಂಟು ಮಾಡುವಂಥ ಕ್ರಮ ಇದಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಆಯುಕ್ತರು ಕೂಡಲೇ ತಮ್ಮ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ ಅವರನ್ನು ರಾಯಚೂರಿನಲ್ಲಿಯೇ ಮುಂದುವರಿ ಸಬೇಕು. ಈ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು. ಅವರು ಈ ಮೊದಲು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಪುನಾ ನಿಯುಕ್ತಿಗೊಳಿಸಬೇಕೆಂದು ಪದಾಧಿಕಾರಿಗಳು ಒತ್ತಾಯಿಸಿದರು.
ಈ ಸಂದರ್ಭ ಸಂಘಟನೆ ಪ್ರಮುಖರಾದ ಲಕ್ಷ್ಮಪ್ಪ ಮಲ್ಲಿಕಾರ್ಜುನ, ಬಸವರಾಜ ಕಳಸ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

