26ರಿಂದ ಭೂಪಾಲ್ನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ
ಗುಲ್ಬರ್ಗ: ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಆ.26 ರಿಂದ 29ರವರೆಗೆ ಎಐಡಿಎಸ್ಒ ಸಂಘಟನೆ ವತಿಯಿಂದ ಮಧ್ಯಪ್ರದೇಶದ ಭೂಪಾಲ್ನಲ್ಲಿ 8ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಸಂಘಟಿಸಲಾಗುವುದು ಎಂದು ಸಂಘಟನೆ ರಾಜ್ಯಾಧ್ಯಕ್ಷ ವಿ.ಎನ್.ರಾಜಶೇಖರ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, 26 ರಾಜ್ಯಗಳ 3 ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು ದೇಶದ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಮುಂದಿನ ಹೋರಾಟಗಳ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ ಎಂದರು.
26ರ ಮೆರವಣಿಗೆ ಮತ್ತು ಬಹಿರಂಗ ಅಧಿವೇಶನದಲ್ಲಿ 30 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಒಂದು ಸಮ್ಮೇಳನದ ಬಹಿರಂಗ ಅಧಿವೇಶನಕ್ಕೆ ಮುಖ್ಯ ಭಾಷಣಕಾರರಾಗಿ ಎಸ್ಯುಸಿಐ ಪಾಲಿಟ್ ಬ್ಯೂರೋನ ಸದಸ್ಯರಾದ ಕೃಷ್ಣ ಚಕ್ರವರ್ತಿ, ಇಂದೂರ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ಪ್ರೊ.ಎ.ಎ. ಅಬ್ಬಾಸಿ, ಪ್ರೊ. ಅನೀಲ್ ಸದ್ಗೋಪಾಲ್, ಸೌರವ ಮುಖರ್ಜಿ ಆಗಮಿಸಲಿದ್ದಾರೆ ಎಂದರು.
ವಿದೇಶಿ ವಿದ್ಯಾರ್ಥಿಗಳು: ದೇಶದ ವಿವಿಧ ರಂಗಗಳ ಗಣ್ಯರು, ಶಿಕ್ಷಣ ತಜ್ಞರು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಉತ್ತರ ಕೊರಿಯಾ, ಸೂಡಾನ್, ಟರ್ಕಿ ಮುಂತಾದ ವಿದೇಶಗಳ ವಿದ್ಯಾರ್ಥಿ ಚಳವಳಿ ಮುಖಂಡರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ ಎಂದರು.
ಕರ್ನಾಟಕದಲ್ಲೂ ಸಮ್ಮೇಳನದ ಸಿದ್ಧತೆ ಭರದಿಂದ ಸಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಸಂಘಟಿಸಲಾಗುತ್ತಿದೆ. ಶುಲ್ಕ ಏರಿಕೆ, ಬಸ್ಪಾಸ್ ಸಮಸ್ಯೆ, ಹಾಸ್ಟೆಲ್ ಸಮಸ್ಯೆಗಳು, ಶಾಲಾ ಕಾಲೇಜುಗಳಲ್ಲಿ ಸೌಲಭ್ಯಗಳ ಕೊರತೆ, ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಪ್ರಕರಣಗಳು, ವಿಶ್ವವಿದ್ಯಾಲಯ ಮಟ್ಟದ ಸಮಸ್ಯೆಗಳು, ಸಿಇಟಿ ಬಿಕ್ಕಟ್ಟು ಮುಂತಾದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಸಮ್ಮೇಳನಗಳನ್ನು, ಜಿಲ್ಲಾ ಮಟ್ಟದ ಪ್ರತಿಭಟನೆಗಳು ನಡೆದಿವೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಎಚ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಶರ್ಮಾ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

