ರಾಯಚೂರು

ಕಂದಾಯ ನಿರೀಕ್ಷಕರ, ಲೆಕ್ಕಿಗರ ವಿರುದ್ಧ ಡಿಸಿ ಗರಂ

Published On :

ಅಫಜಲ್ಪುರ: ಸರ್ಕಾರ ಬಡವರಿಗಾಗಿ, ನಿರ್ಗತಿಕರಿಗಾಗಿ ನೀಡುವ ಮಾಶಾಸನ ಬಗ್ಗೆ ಸರಿಯಾದ ಮಾಹಿತಿ ನೀಡಿ ಮಂಜೂರಾತಿ ಮಾಡುವಲ್ಲಿ ವಿಫಲಗೊಂಡಿರುವ ಕಂದಾಯ ನಿರೀಕ್ಷಕರ ಹಾಗೂ ಗ್ರಾಮ ಲೆಕ್ಕಿಗರ ವಿರುದ್ಧ ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಹರಿಹಾಯ್ದರು.
ತಾಲೂಕಿನ ಕರಜಗಿ ಗ್ರಾಮದ ನಾಡ ಕಚೇರಿಯಲ್ಲಿ ಏರ್ಪಡಿಸಿದ್ದ ಪಿಂಚಣಿ ಯೋಜನೆ ಅದಾಲತ್ನಲ್ಲಿ ಭಾಗವಹಿಸಿ ಮಾತನಾಡಿ, ಮಾಶಾಸನಕ್ಕಾಗಿ ಅರ್ಜಿ ನೀಡಿದವರ ಎಲ್ಲ ಸೂಕ್ತ ದಾಖಲೆಗಳನ್ನು ಮಾಹಿತಿಗಳನ್ನು ಪರಿಶೀಲಿಸಿ ಸೆಪ್ಟೆಂಬರ್ನಲ್ಲಿ ಅರ್ಹರಿಗೆ ಮಾಶಾಸನ ಮಂಜೂರು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಮಹಿಳೆಯರು ಮಾತನಾಡಿ, ನಮಗೆ ನ್ಯಾಯಬೆಲೆ ಅಂಗಡಿಯಲ್ಲಿ ವಿತರಕರು ಆಹಾರಧಾನ್ಯ ನೀಡುತ್ತಿಲ್ಲ ಎಂದು ದೂರಿದಾಗ, ಜಿಲ್ಲಾಧಿಕಾರಿ ಸುಮಾರು 200 ಪಡಿತರ ಚೀಟಿಗಳನ್ನು ಗ್ರಾಮಸ್ಥರಿಂದ ಸಂಗ್ರಹಿಸಿ ಆಹಾರ ಇಲಾಖೆಯ ಅಧಿಕಾರಿಗಳು ನಾಡಕಚೇರಿಗೆ ತಕ್ಷಣ ಬರಬೇಕೆಂದು ಸೂಚಿಸಿದರು. ಆಹಾರ ಇಲಾಖೆಯ ಅಧಿಕಾರಿ ಬರದೆ ಇದ್ದಾಗ ಪಡಿತರ ಚೀಟಿಗಳನ್ನು ಗುಲ್ಬರ್ಗಕ್ಕೆ ತೆಗೆದುಕೊಂಡು ಹೋಗಿ ವಿಚಾರಿಸಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದರು.
ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.
ವಿವಿಧ ಕಾರಣಗಳಿಂದಾಗಿ ವೃದ್ದಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ ಸ್ಥಗಿತವಾಗಿದ್ದು, ಜಿಲ್ಲಾಧಿಕಾರಿ ಪರಿಶೀಲಿಸಿ ಸ್ಥಳದಲ್ಲಿಯೇ ಸುಮಾರು 100 ಜನರಿಗೆ ಮಾಶಾಸನ ನೀಡಬೇಕೆಂದು ಆದೇಶಿಸಿದರು.
ನಂತರ ಜಿಲ್ಲಾಧಿಕಾರಿ ಬಿಸಿಎಂ, ಮೆಟ್ರಿಕ್ ಪೂರ್ವ ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ, ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹಾಗೂ ಉರ್ದು ಶಾಲೆಗಳಿಗೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು. ತಹಸೀಲ್ದಾರ್ ಚಂದ್ರಶೇಖರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.