ಮಂತ್ರಾಲಯದಲ್ಲಿ ಸಾಮೂಹಿಕ ಯಜ್ಞೋಪವೀತ ಧಾರಣೆ
ರಾಯಚೂರು: ಮಂತ್ರಾಲಯದಲ್ಲಿ ಮಂಗಳವಾರ ರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವ ಸಂದರ್ಭ ಋಗ್ವೇದ, ಯಜುರ್ವೇದ ಸಾಮೂಹಿಕ ಉಪಾಕರ್ಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರಾಧನೆ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಬ್ರಾಹ್ಮಣ ಸಮಾಜದವರು ಸಾಮೂಹಿಕ ಯಜ್ಞೋಪವೀತ ಧಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಜ್ಞೋಪವೀತ ಧರಿಸಿದರು. ಈ ವೇಳೆ ಶ್ರೀಮಠದ ಪೀಠಾಧಿಪತಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಶ್ರೀಸುಯಮೀಂದ್ರಾಚಾರ್ಯ, ಶ್ರೀಪತಿ, ಸೇರಿದಂತೆ ಶ್ರೀಮಠದ ವಿದ್ವಾಂಸರು, ಪಂಡಿತರು ಮತ್ತಿತರರು ಉಪಸ್ಥಿತರಿದ್ದರು.
ಇಂದಿನಿಂದ ಶ್ರೀರಾಯರ ಆರಾಧನೆ: ಮಂತ್ರಾಲಯದಲ್ಲಿ ಆ.21ರಿಂದ 23ರವರೆಗೆ ರಾಘವೇಂದ್ರತೀರ್ಥರ 342ನೇ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಶ್ರೀಮಠದಲ್ಲಿ ಈಗಾಗಲೇ ಶ್ರೀರಾಯರ ಆರಾಧನಾ ಮಹೋತ್ಸವದ ಅಂಗವಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಆ.21 ರಂದು ರಾಯರ ಪೂರ್ವಾರಾಧನೆ ಅಂಗವಾಗಿ ವಿಶೇಷ ಅಭಿಷೇಕ, ಧಾರ್ಮಿಕ ಪ್ರವಚನ ನಡೆಯಲಿವೆ. ಅದೇ ದಿನ ಸಂಜೆ 7.30ಕ್ಕೆ ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ ಮತ್ತು ಆಸ್ಥಾನ್ ವಿದ್ವಾನ್ ಪುರಸ್ಕಾರ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಆ.22 ರಂದು ಮಧ್ಯಾರಾಧನೆಯ ಅಂಗವಾಗಿ ಶ್ರೀರಾಯರ ಮೂಲಬೃಂದಾವನಕ್ಕೆ ವಿಶೇಷ ಮಹಾಪಂಚಾಮೃತ ಅಭಿಷೇಕ ನಡೆಯಲಿದೆ. ಆ.23 ರಂದು ಮಹಾರಥೋತ್ಸವ ನಡೆಯಲಿದ್ದು, ಆರಾಧನಾ ಮಹೋತ್ಸವದ ಅಂಗವಾಗಿ ದಿನವೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

