ರಾಯಚೂರು

ಅಹಿಂದ ಪದಾಧಿಕಾರಿಗಳ ಆಯ್ಕೆ

Published On :

ಗುಲ್ಬರ್ಗ: ಕರ್ನಾಟಕ ರಾಜ್ಯ ಅಹಿಂದ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್.ಎಚ್. ಪ್ರಕಾಶರವರ ಅಧ್ಯಕ್ಷತೆಯಲ್ಲಿ ನಡೆದ ಗುಲ್ಪರ್ಗ ಜಿಲ್ಲೆಯ ಅಲ್ಪ ಸಂಖ್ಯಾತರ ಹಿಂದುಳಿದ ಮತ್ತು ದಲಿತ ನೌಕರರ (ಅಹಿಂದ) ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಶಹಾಬಾದ ಸರ್ಕಾರಿ ಪದವೀಧರ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಗುರು  ಶಿವಪುತ್ರ ಕೋಣಿನ್ ಅವರನ್ನು ಅಹಿಂದ ಜಿಲ್ಲಾಧ್ಯಕ್ಷರಾಗಿ,  ಭೀಮಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವಿಠ್ಠಲ ವಗ್ಗನ ಪ್ರಧಾನ ಕಾರ್ಯದರ್ಶಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಲ್ಲಾವುದ್ದೀನ್ ಸಾಗರ ಅವರನ್ನು ಗೌರವಾಧ್ಯಕ್ಷರಾಗಿ, ಅಫಜಲ್ಪೂರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಪೂಜಾರಿಯನ್ನು ಖಜಾಂಚಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಪದಾಧಿಕಾರಿಗಳು ಸಮಸ್ತ ಜಿಲ್ಲೆಯ ಅಹಿಂದ ನೌಕರರ ಹಕ್ಕುಗಳಿಗಾಗಿ ಮತ್ತು ಅವರ ರಕ್ಷಣೆಗಾಗಿ ಕಾರ್ಯತತ್ಪರರಾಗಲು ರಾಜ್ಯಾಧ್ಯಕ್ಷ ಸೂಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.