ಗೆಲ್ಲುವ ಆತ್ಮವಿಶ್ವಾಸ ಅವಶ್ಯ: ವಜ್ಜಲ್
ಕ.ಪ್ರ.ವಾರ್ತೆ, ಲಿಂಗಸ್ಗೂರು, ಆ.22
ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಮಕ್ಕಳು ಗೆಲ್ಲುವ ಆತ್ಮವಿಶ್ವಾಸ ಹೊಂದಬೇಕೆಂದು ಶಾಸಕ ಮಾನಪ್ಪ ವಜ್ಜಲ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢ ಶಾಲಾ) ವಿಭಾಗದ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2013- 14ನೇ ಸಾಲಿನ ಲಿಂಗಸ್ಗೂರು ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಯಲು ಕ್ರೀಡಾ ತಂಡಗಳ ದೈಹಿಕ ಶಿಕ್ಷಕರ ಸಹಕಾರ ಅಗತ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪರಸ್ಪರ ಸೌಹಾರ್ದಯುತವಾಗಿ ಆಟವಾಡಬೇಕು. ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸುವ ಜೊತೆಗೆ ಕ್ರೀಡಾ ನಿಯಮ ಪಾಲನೆ ಮಾಡಬೇಕು.
ಲಿಂಗಸ್ಗೂರು ವಲಯಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಿದ 13 ಶಾಲೆಗಳ ಮಕ್ಕಳು ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸುವ ಮೂಲಕ ಶಾಲೆಗಳ ಹೆಸರು ತರಬೇಕೆಂದು ಶುಭ ಹಾರೈಸಿದರು.
ಜಿಪಂ ಸದಸ್ಯ ಭೂಪನಗೌಡ ಕರಡಕಲ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಭೂಪನಗೌಡ ಕರಡಕಲ್, ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ, ಮುಖ್ಯಗುರು ಶಂಕರಗೌಡ, ದೈಹಿಕ ಶಿಕ್ಷಕಿ ಗಂಗಮ್ಮ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಶಿವಾನಂದ ಐದನಾಳ, ಎಸ್.ಆರ್. ರಸೂಲ, ಖಾಜಾ ಹುಸೇನ, ಚಂದ್ರಶೇಖರ ವಕೀಲರು, ನಾಗರಾಜ, ಮಹ್ಮದ ಖಾಜಾ ಹುಸೇನ, ಖಾಜಾಪಾಶಾ, ಹೇಮಂತ, ಹನುಮಂತಪ್ಪ, ವೀರಭದ್ರಪ್ಪ, ಶರೀಫಸಾಬ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

