ರಾಯಚೂರು

ವೈದ್ಯಕೀಯ ತಪಾಸಣೆ ಶಿಬಿರ

Published On :

ರಾಯಚೂರು: ನಾಟಕ ಅಕಾಡೆಮಿ ಫೆಲೋಶಿಪ್ ಪುರಸ್ಕೃತ ಲಿಂ. ಮಹಾಂತಯ್ಯ ಸ್ವಾಮಿ ಮುಂಡರಗಿಮಠ ಅವರ ದಶಮಿ ಪುಣ್ಯಸ್ಮರಣೆ ಅಂಗವಾಗಿ ಆ.23ರಂದು ಮಾನವಿ ತಾಲೂಕಿನ ಕವಿತಾಳದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮತ್ತು ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಎಂ.ಗಿರಿಜಾಪತಿ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾನವಿ ತಾಲೂಕಿನ ಕವಿತಾಳದ ತ್ರಯಂಬಕೇಶ್ವರ ಸಿನಿಮಾ ಮಂದಿರದಲ್ಲಿ ಸಂಜೆ 5ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದ್ದು, ಶಾಸಕ ಹಂಪನೌಡ ಬಾದರ್ಲಿ ಉದ್ಘಾಟಿಸಲಿದ್ದಾರೆಂದು ಹೇಳಿದರು.
ಮಾನವಿಯ ಕಲ್ಮಠದ ಶ್ರೀಬಸವಲಿಂಗ ದೇವರು ಸಾನ್ನಿಧ್ಯ ವಹಿಸುವರು. ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷೆ ಕೆ.ಎಂ. ಪಾರ್ವತಮ್ಮ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಕುಂ.ವೀರಭದ್ರಪ್ಪ, ಪ್ರೊ.ಎಂ.ವೆಂಕಟೇಶ ಕುಮಾರ್, ಎಂ.ಬಿ.ಪಾಟೀಲ್‌ರಿಗೆ ಪ್ರಸಕ್ತ ಸಾಲಿನ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ತೋರಣದಿನ್ನಿ ಶರಣಪ್ಪ ಮತ್ತು ಪ್ರೊ. ಕವಿತಾಳ ಗೌಡರೆಡ್ಡಿ ಅವರನ್ನು ಈ ವೇಳೆ ಸನ್ಮಾನಿಸಲಾಗುತ್ತಿದ್ದು, ಕವಿತಾಳ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂದೇ ಬೆಳಿಗ್ಗೆ 10ರಿಂದ ಸಂಜೆಯ 5ರವರೆಗೆ ಆರೋಗ್ಯದ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಶಿಬಿರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾರಾಯಣಪ್ಪ ಉದ್ಘಾಟಿಸಲಿದ್ದಾರೆ. ಪರಿಣಿತ ವೈದ್ಯರ ತಂಡ ಜನರ ಆರೋಗ್ಯದ ತಪಾಸಣೆ ನಡೆಸಲಿದೆ. ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಿದರು.
ಕಸಾಪ ನಿಕಟಪೂರ್ವ ಅಧ್ಯಕ್ಷ ಅಯ್ಯಪ್ಪ ತುಕ್ಕಾಯಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.