'ಗುಣಮಟ್ಟದ ಶಿಕ್ಷಣ ಅಗತ್ಯ'
ಕನ್ನಡಪ್ರಭ ವಾರ್ತೆ ಸಿಂಧನೂರು ಅ.23
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ. ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಉಚಿತವಾಗಿ ಪುಸ್ತಕ, ಸೈಕಲ್, ಬಿಸಿಯೂಟ, ಬಟ್ಟೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಮಾಜಿ ಸಂಸದ, ಕನಕದಾಸ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ವಿರೂಪಾಕ್ಷಪ್ಪ ಕರೆ ನೀಡಿದರು.
ನಗರದ ಕನಕದಾಸ ವಸತಿ ನಿಲಯದಲ್ಲಿ ಗುರುವಾರ ಕನಕದಾಸ ಪ.ಪೂ. ಕಾಲೇಜಿನ, ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ದಾರಿದೀಪ: ಪ್ರತಿಯೊಬ್ಬರಲ್ಲಿಯೂ ಸಹೋದರ ಭಾವನೆ ಬೆಳೆಸಲು ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗುತ್ತದೆ. ಇದರಿಂದ ಹೊಸಬರು-ಹಳಬರು ಎನ್ನುವ ಭಾವನೆ ನಮ್ಮಿಂದ ದೂರವಾಗುತ್ತದೆ. ಶಿಕ್ಷಣ ಪಡೆದರೆ ಮಾತ್ರ ಸಮಾಜದಲ್ಲಿ ನಾವು ತಲೆ ಎತ್ತಿ ಬದುಕಲು ಸಾಧ್ಯ. ಶಿಕ್ಷಕರೂ ಸಹ ತಮ್ಮ ಜವಾಬ್ದಾರಿಯನ್ನು ಅರಿತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಸುಂದರ ಬದುಕನ್ನು ಕಟ್ಟಿಕೊಳ್ಳಲು ಶಿಕ್ಷಣ ದಾರಿ ದೀಪವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಎಂ. ದೊಡ್ಡಬಸವರಾಜ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿದರೆ ಮಾತ್ರ ಎಲ್ಲ ಸಾಧನೆ ಮಾಡಬಹುದಾಗಿದೆ. ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕನಕದಾಸ ಶಿಕ್ಷಣ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದರು.
ಪತ್ರಕರ್ತ ಶರಣಪ್ಪ ಬೇರ್ಗಿ ಮಾತನಾಡಿದರು. ತುರ್ವಿಹಾಳ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯ ಕರಿಬಸಯ್ಯ ಹಿರೇಮಠ, ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಚನ್ನಬಸವ ಸಜ್ಜನ್, ಪ್ರಸಾದ ನಿಲಯದ ಅಧ್ಯಕ್ಷ ಸಣ್ಣಈರಪ್ಪ ಪೂಜಾರಿ, ಪ.ಪೂ. ಕಾಲೇಜಿನ ಪ್ರಾಚಾರ್ಯ ಮಂಜುನಾಥ ಸೋಮಲಾಪುರ, ಪ್ರೌಢಶಾಲೆಯ ಮುಖ್ಯಗುರು ನಾಗಲಿಂಗನಗೌಡ, ಪ್ರಾಥಮಿಕ ಶಾಲೆಯ ಮುಖ್ಯಗುರು ಮಲ್ಲಿಕಾರ್ಜುನ ಹಾಗೂ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿ ಬರೆದ “A£%OÚ ಶೋಷಣೆಗಳಿಗೆ ಕೊನೆ GM¥Úß’ ಎಂಬ ಪುಸ್ತಕವನ್ನು ಮಾಜಿ ಸಂಸದ ವಿರೂಪಾಕ್ಷಪ್ಪ ಬಿಡುಗಡೆಗೊಳಿಸಿದರು.
ಸನ್ಮಾನ: ಜಿಲ್ಲಾ ಅತ್ಯುತ್ತಮ ವರದಿಗಾರ ಪ್ರಶಸ್ತಿ ಪುರಸ್ಕೃತರಾದ ಅಮರೇಶ ಅಲಬನೂರು, ಚಂದ್ರಶೇಖರ ಬೆನ್ನೂರು, ದಾನಿಗಳಾದ ಶ್ರೀನಿವಾಸರಾವ್, 2012-13ನೇ ಸಾಲಿಗೆ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಬಸಮ್ಮ ವಿರೂಪಾಕ್ಷಪ್ಪ, ಕೆಂಚಪ್ಪ ಗ್ಯಾನಪ್ಪ, ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಕಲ್ಪನಾ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

