ವಕೀಲರಿಗೆ ವೃತ್ತಿ ನಿಷ್ಠೆ, ಅವಶ್ಯ: ನ್ಯಾ.ಶಶಿಧರ
ಸಿಂಧನೂರು: ಹಿರಿಯ ವಕೀಲರಿಗೆ ಗೌರವ, ವೃತ್ತಿಯಲ್ಲಿ ನಿಷ್ಠೆ, ಸತತ ಅಭ್ಯಾಸ ಅವಶ್ಯಕ ಎಂದು ಹಿರಿಯ ಶ್ರೇಣಿ ಸಿವಿ ಲ್ ನ್ಯಾಯಾಧೀಶ ಆರ್.ವೈ. ಶಶಿಧರ ಹೇಳಿದರು.
ಅವರು ಶನಿವಾರ ನ್ಯಾಯವಾದಿಗಳ ಸಂಘದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮತ್ತು ತಾಲೂಕು ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಕಾನೂನು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವಕೀಲರು ಕಕ್ಷಿದಾರರಿಗೆ ಮೋಸವೆಸಗಬಾರದು ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್ ಮಾತನಾಡಿ, ನ್ಯಾಯಾಂಗ ಕ್ಷೇತ್ರ ಶಕ್ತಿಯುತವಾದದ್ದು. ಸಮಾಜದಲ್ಲಿ ವಕೀಲರಿಗೆ ಉನ್ನತವಾದ ಸ್ಥಾನವಿದೆ. ವಕೀಲಿ ವೃತ್ತಿಯೊಂದಿಗೆ ಸಾಮಾಜಿಕ ಬದಲಾವಣೆಗಳಿಗೆ ಶ್ರಮಿಸಬೇಕು ಎಂದು ಹೇಳಿದರು.
ತಹಶೀಲ್ದಾರ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ವಕೀಲರು ಪ್ರತಿನಿತ್ಯ ಕಾನೂನು ಅಧ್ಯಯನ ನಡೆಸಿ ತಮ್ಮ ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ರಾಯಣ್ಣವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಾಂಡುರಂಗ ನಾಯಕ, ಉಪನ್ಯಾಸಕ ಜಗದೀಶ ಮುಂಡರಿಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದಶರ್ ಕೆ. ಹನುಮೇಶ, ಖಜಾಂಚಿ ಸುರೇಶರಡ್ಡಿ ಚನ್ನಳ್ಳಿ, ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ವಹಿಸಿದ್ದರು. ಖಾಜಿಮಲಿಕ್ ಅಹ್ಮದ ಸ್ವಾಗತಿಸಿದರು. ಪುಟ್ಟಮಾಧವಸ್ವಾಮಿ ಪ್ರಾರ್ಥಿಸಿದರು. ವೀರಭದ್ರಪ್ಪ ನಿರೂಪಿಸಿದರು. ಜಿ. ನಾಗರಾಜ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

