ರಾಯಚೂರು

ಸಿಎಂಗೆ ಮನವಿಗಳ ಮಹಾಪೂರ

Published On :

ಸಿಂಧನೂರು: ಸಂವಿಧಾನದ 371(ಜೆ) ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನಿವೇಶನ, ಕಟ್ಟಡ, ಪ್ರಯೋಗಾಲಯ ಮತ್ತಿತರ ಮೂಲಸೌಕರ್ಯಗಳನ್ನು ನೀಡಲು ಒತ್ತಾಯಿಸಿ ತಾಲೂಕು ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಮಲ್ಲನಗೌಡ ಕಾನಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.
ಹೆಲಿಪ್ಯಾಡ್‌ನಲ್ಲಿ ಮನವಿಪತ್ರ ಸಲ್ಲಿಸಿದ ಒಕ್ಕೂಟದ ಪದಾಧಿಕಾರಿಗಳು ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರವೇ ನಿವೇಶನ ನೀಡಬೇಕು, 6-14 ವರ್ಷದೊಳಗಿನ ಮಕ್ಕಳನ್ನು ಆರ್ಟಿಇಗೆ ಒಳಪಡಿಸಿ ಸರ್ಕಾರವೇ ಶುಲ್ಕ ಭರಿಸಬೇಕು, ಪ್ರತಿ ತಾಲೂಕಿಗೆ ವಿಜ್ಞಾನ ಕೇಂದ್ರ ಸ್ಥಾಪನೆ, ಸರ್ಕಾರಿ ಶಾಲೆಗಳಿಗೆ ಒದಗಿಸುತ್ತಿರುವ ಬಿಸಿಯೂಟ, ಹಾಲು, ಸಮವಸ್ತ್ರ, ಆಟದ ಸಾಮಗ್ರಿ ಇತ್ಯಾದಿ ಸೌಲಭ್ಯಗಳನ್ನು ಖಾಸಗಿ ಅನುದಾನಿತ ಶಾಲೆಗಳಿಗೂ ವಿಸ್ತರಿಸಬೇಕು, ಶೈಕ್ಷಣಿಕ ತರಬೇತಿ ಶಿಬಿರಗಳನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರಕ್ಕಾಗಿ ಪ್ರತಿಶಾಲೆಗೆ ವಾರ್ಷಿಕ ಹತ್ತು ಸಾವಿರ ರೂಪಾಯಿ ಧನಸಹಾಯ, ಗುಣಮಟ್ಟದ ಶಿಕ್ಷಣ ಒದಗಿಸುವ ಶಾಲೆಗಳನ್ನು ಗುರುತಿಸಿ ವಿಶೇಷ ಪ್ಯಾಕೇಜ್, ವೃತ್ತಿಪರ ಕೋರ್ಸ್, ಕಾಲೇಜುಗಳನ್ನು ಆರಂಭಿಸಬೇಕು, ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕ ಹಾಗೂ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಬೇಕೆಂಬ ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಒಕ್ಕೂಟದ ಕಾರ್ಯದರ್ಶಿ ನರೇಂದ್ರನಾಥ, ಪದಾಧಿಕಾರಿಗಳಾದ ಶ್ಯಾಂಸುಂದರ, ಎಚ್.ಜಿ. ಹಂಪಣ್ಣ, ಎಸ್.ಬಸವರಾಜ, ಮುನೀಶ್ವರರಾವ್, ರಾಮಕೃಷ್ಣಮೂರ್ತಿ, ಗೌತಮ್ ಮೆಹ್ತಾ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.