ರಾಯಚೂರು

ಆದರ್ಶ ವಿದ್ಯಾಲಯ ಕಟ್ಟಡ ಕಾಮಗಾರಿಗೆ ವಜ್ಜಲ್ ಚಾಲನೆ

Published On :

ಲಿಂಗಸ್ಗೂರು: ಪಟ್ಟಣದ ಸರ್ಕಾರಿ ತೋಟದಲ್ಲಿ ಆದರ್ಶ ವಿದ್ಯಾಲಯ ಕಟ್ಟಡ ಕಾಮಗಾರಿ ಆರಂಭಕ್ಕೆ ಶಾಸಕ ಮಾನಪ್ಪ ವಜ್ಜಲ್  ಸೋಮವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದ ಆರ್ಎಂಎಸ್ಎ ಯೋಜನೆಯಡಿ 3.8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ಕಾಮಗಾರಿ 18 ತಿಂಗಳ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದೆಂದು ಬಿಎಸ್ಆರ್ ಇನ್ಫೋಟೆಕ್ ಇಂಡಿಯಾ ಲಿ.ಕಂ. ಇಂಜಿನಿಯರ್ ಸಂತೋಷ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಶಿವಾನಂದ ಐದನಾಳ, ಮಲ್ಲಿಕಾರ್ಜುನಯ್ಯ ಹಿರೇಮಠ, ಅಮರೇಶ ಗಂಭೀರಮಠ, ಪ್ರಕಾಶ ವಿಟ್ಲಾಪೂರ ಸೇರಿದಂತೆ ಇದ್ದರು.
ಡೆಂಘೀ ಜ್ವರ:
ಗ್ರಾಮಸ್ಥರಿಗೆ ಮಾಹಿತಿ
ದೇವದುರ್ಗ: ಮನೆಗಳ ಸುತ್ತಮುತ್ತಲಿನ ಪರಿಸರವನ್ನು ಸ್ವಚ್:್ವಾಗಿರಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಲು ನೆರವಾಗುವಂತೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರೀತಿ ಪಾಟೀಲ್ ಗ್ರಾಮಸ್ಥರಿಗೆ ಕರೆ ನೀಡಿದರು. ಈಚೆಗೆ ಮಲ್ಲೇದೇವರಗುಡ್ಡ ಗ್ರಾಮದಲ್ಲಿ ಡೆಂಘೀ ಜ್ವರದಿಂದ ಇಬ್ಬರು ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆ ಗ್ರಾಮದ ಮನೆ ಮನೆಗೆ ತೆರಳಿ ಮಾಹಿತಿ ನೀಡಿದರು. ರಾಮದುರ್ಗ ವೈದ್ಯಾಧಿಕಾರಿ ಡಾ. ಸವಿತಾ, ಬಿಎಚ್ ಇಒ ಶಿವಪ್ಪ, ಹನುಮಂತ ಏಕ್ಬೋಟಿ, ಉಮೇಶ, ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚೆನ್ನಮ್ಮ, ಸರಸ್ವತೆಮ್ಮ, ಸೋಮಣ್ಣ ನಾಯಕ, ಬಸಲಿಂಗ ನಾಯಕ, ರಂಗಪ್ಪ, ಗಂಗಪ್ಪ ಕೊರವಿ ಇದ್ದರು.
ಅಹವಾಲು ಸ್ವೀಕಾರ
ರಾಯಚೂರು: ಜಿಲ್ಲಾ ಲೋಕಾಯುಕ್ತ ಆಧಿಕಾರಿಗಳು ಆ.28 ಮತ್ತು ಆ.29ರಂದು ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿಲ್ಲೆಯ ಸಿಂಧನೂರಿನ ಪ್ರವಾಸಿ ಮಂದಿರದಲ್ಲಿ ಆ.28ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಆ.29ರಂದು ಮಾನವಿಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕರಿಂದ ಕುಂದುಕೊರತೆಗಳ ದೂರು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ನೀಡಲು ಜಿಲ್ಲಾ ಲೋಕಾಯುಕ್ತ ಕಚೇರಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.