ರಾಯಚೂರು

ಎಚ್ಡಿಕೆ ರಾಜಿನಾಮೆ ಹಿಂಪಡೆಯಲಿ: ಮಾನಪ್ಪ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಆ.26
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಗೂ ವಿರೋಧ ಪಕ್ಷದ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ತಮ್ಮ ರಾಜಿನಾಮೆ ಹಿಂಪಡೆಯಬೇಕೆಂದು ಶಾಸಕ ಮಾನಪ್ಪ ವಜ್ಜಲ್ ಮನವಿ ಮಾಡಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚಿಗೆ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಿಗೆ ಲೋಕಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಪರಾಭವಗೊಂಡ ಪರಿಣಾಮ ಜೆಡಿಎಸ್ ನಾಯಕ ಕುಮಾರಸ್ವಾಮಿ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಲು ನಿರ್ಧರಿಸಿರುವುದು ಪಕ್ಷದ ನಿಷ್ಠಾವಂತ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನೋವು ತಂದಿದ್ದು, ಪಕ್ಷದ ರಾಷ್ಟ್ರೀಯ ವರಿಷ್ಠ ಹೆಚ್.ಡಿ. ದೇವೇಗೌಡರು ಯಾವುದೇ ಕಾರಣಕ್ಕೂ ರಾಜಿನಾಮೆ ಅಂಗೀಕರಿಸಬಾರದೆಂದು ಮನವಿ ಮಾಡಿದರು.
ಬರುವ ಲೋಕಸಭೆ ಹಾಗೂ ಇತರೆ ಎಲ್ಲ ಚುನಾವಣೆಗಳ ನಿಮಿತ್ತ ಗ್ರಾಮ, ತಾಲೂಕು, ಜಿಲ್ಲಾಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜಿನಾಮೆ ಹಿಂದಕ್ಕೆ ಪಡೆದು ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಧೈರ್ಯ ತುಂಬಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಶಿವಾನಂದ ಐದನಾಳ, ಮಲ್ಲಿಕಾರ್ಜುನಯ್ಯ ಹಿರೇಮಠ, ಅಮರೇಶ ಗಂಭೀರಮಠ, ಪ್ರಕಾಶ ವಿಟ್ಲಾಪೂರ ಸೇರಿದಂತೆ ಇದ್ದರು.

ಅರ್ಜಿ ಆಹ್ವಾನ
ರಾಯಚೂರು: ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯಕ್ಕೆ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಕರೆಯಲಾಗಿದೆ.
2013-14ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಕರೆದಿದ್ದು, ಅಗತ್ಯ ದಾಖಲೆಗಳೊಂದಿಗೆ ಸೆ.10ರೊಳಗೆ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಯಚೂರಿನ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.