ಸಂಕ್ಷಿಪ್ತ ಸುದ್ದಿ
ವೈಜ್ಞಾನಿಕ ಸಲಹಾ ಸಮಿತಿ ಸಭೆ ಯಶಸ್ವಿ
ರಾಯಚೂರು: ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಈಚೆಗೆ ವೈಜ್ಞಾನಿಕ ಸಲಹಾ ಸಮಿತಿ 18ನೇ ಸಭೆ ಆಯೋಜಿಸಲಾಗಿತ್ತು.ಅರ್ಧ ವಾರ್ಷಿಕ ಪರಿಶೀಲನಾ ಉದ್ದೇಶವನ್ನು ಹೊಂದಿದ್ದ ಈ ಸಭೆಯಲ್ಲಿ ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಕಳೆದ ಆರು ತಿಂಗಳ ಚಟುವಟಿಕೆಗಳ ಪ್ರಗತಿಯನ್ನು ಹಾಗೂ ಹೊಸ ಕಾರ್ಯಚಟುವಟಿಕೆಗಳ ವಿವರಣೆಯನ್ನು ಕಾರ್ಯಕ್ರಮ ಸಂಯೋಜಕ ಡಾ. ಪ್ರಮೋದ ಕಟ್ಟಿ ನೀಡಿದರು. ವಿವಿಧ ವಿಷಯ ತಜ್ಞರು ತಮ್ಮ ತಮ್ಮ ಚಟುವಟಿಕೆಗಳ ವರದಿ ಮಂಡಿಸಿದರು. ಜಿಲ್ಲೆಯ ಎಲ್ಲ ಅಭಿವೃದ್ಧಿ ಇಲಾಖೆಗಳ ಮುಖ್ಯಸ್ಥರು ಹಾಗೂ ರೈತರು ಈ ಸಭೆಯಲ್ಲಿ ಭಾಗವಹಿಸಿ ತಜ್ಞರಿಂದ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ಸಭೆಯಲ್ಲಿ ಸಂಶೋಧನಾ ನಿರ್ದೇಶಕ ಡಾ. ಬಿ.ಎಸ್. ಜಾನಗೌಡರ್, ಸಹ ಸಂಶೋಧನಾ ನಿರ್ದೇಶಕ ಸೋಮಶೇಖರ, ಮತ್ತಿತರರು ಇದ್ದರು.
ನಾಳೆ ಕ್ರಾಸ್ 8 ಕಿ.ಮೀ.ಕಂಟ್ರಿ ಓಟ
ರಾಯಚೂರು: ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ಎಡು ಏಷಿಯಾ ಇಂಟರ್ ನ್ಯಾಷನಲ್ ಸ್ಕೂಲ್ ಆಶ್ರಯದಲ್ಲಿ ಆ.29 ರಂದು ಖ್ಯಾತ ಒಲಂಪಿಯನ್ ಧ್ಯಾನಚಂದ್ ಸ್ಮರಣಾರ್ಥ 8ಕಿಮೀ ಕ್ರಾಸ್ ಕಂಟ್ರಿ ಓಟವನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ ಅವರು ಓಟಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ವಿಜೇತರಿಗೆ ಬಹುಮಾನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪಾಪಾರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ. ಸತ್ಯನಾರಾಯಣ, ಹಿರಿಯ ಉಪಾ ಧ್ಯಕ್ಷ ಚಂದ್ರಶೇಖರ್ ರೆಡ್ಡಿ, ಆರ್‌ಡಿಎ ಮಾಜಿ ಅಧ್ಯಕ್ಷ ರಾಜಕುಮಾರ್, ಶಂಕರ್ ಸಿಂಗ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದೆ.
ಪ್ರಥಮ ರ್ಯಾಂಕ್
ರಾಯಚೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿ ಮಹೇಶಕುಮಾರ್ ಈಚೇಗೆ ನಡೆದ ಪರೀಕ್ಷೆಯಲ್ಲಿ 552 ಅಂಕಗಳನ್ನು ಪಡೆದು ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಕಾಲೇಜಿನ ಪ್ರಾಚಾರ್ಯ ಮಹಿಪಾಲ ರೆಡ್ಡಿ, ಮಹೇಶಕುಮಾರ್ ಕಳೆದ ಬಾರಿಯಂತೆ ಈ ಬಾರಿಯೂ ಬಿಸಿಎ ವಿಭಾಗದಲ್ಲಿ ಉತ್ತಮ ಸಾಧನೆ ಮೆರೆದಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು, ನಾಳೆ ವಿಜ್ಞಾನ ನಾಟಕ ಸ್ಪರ್ಧೆ
ರಾಯಚೂರು: 2013-14ನೇ ಸಾಲಿಗೆ ವಿಜ್ಞಾನ ನಾಟಕ ಸ್ಪರ್ಧೆ ಹಾಗೂ ವಿಚಾರ ಗೋಷ್ಠಿ ಸ್ಪರ್ಧೆಗಳಲ್ಲಿ ತಾಲೂಕು ಮಟ್ಟದಲ್ಲಿ ವಿಜೇತ ವಿದ್ಯಾರ್ಧಿಗಳಿಗೆ ಆ.28 ರಿಂದ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಆ.28ರಂದು ವಿಚಾರ ಗೋಷ್ಠಿ ಹಾಗೂ ಆ.29ರಂದು ವಿಜ್ಞಾನ ನಾಟಕ ಸ್ಪರ್ಧೆಗಳನ್ನು ಬೆಳಗ್ಗೆ 10ಕ್ಕೆ ಯರಮರಸ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ ಎಂದು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿದೆ.
30ರಂದು ರ್ಯಾಗಿಂಗ್ ವಿರೋಧಿ ಕಾರ್ಯಾಗಾರ
ರಾಯಚೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನವೋದಯ ಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಆ. 30ರಂದು ರ್ಯಾಗಿಂಗ್ ವಿರೋಧಿ ಕಾರ್ಯಾಗಾರ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 9.30ಕ್ಕೆ ಕಾರ್ಯಾಗಾರ ಹಮ್ಮಿಕೊಂಡಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಪಿ.ಕೃಷ್ಣ ಭಟ್ ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ಎಎಸ್ಪಿ ಡಾ. ದಿವ್ಯಾ ಗೋಪಿನಾಥ, ನವೋದಯ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ. ಎಸ್.ಆರ್. ಹೆಗಡೆ, ನವೋದಯ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ವಿ. ಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗ ನಾಯಕ ಅಧ್ಯಕ್ಷತೆ ವಹಿಸುವರು. ನ್ಯಾಯವಾದಿಗಳಾದ ಮೇರಿ ಡ್ಯಾನಿಯಲ್ ರ್ಯಾಗಿಂಗ್ ವಿರೋಧಿ ಕಾನೂನು ಕುರಿತು ವಿಷಯ ಮಂಡಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

