ರಾಯಚೂರು

ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ

Published On :

ಮುದಗಲ್: ಕ್ರೀಡಾ ಕೂಟದಲ್ಲಿ ಸೋಲು ಗೆಲವು ಮುಖ್ಯ ಅಲ್ಲ, ಭಾಗವಹಿಸುವುದು ಮುಖ್ಯ ಎಂದು ಎಪಿಎಂಸಿ ಉಪಾಧ್ಯಕ್ಷ ಎಸ್.ಆರ್.ರಸೂಲ್ ಹೇಳಿದರು. ಪಟ್ಟಣದ ಸಜ್ಜಲಶ್ರೀ ಪ್ರೌಢಶಾಲೆ ಆವರಣದಲ್ಲಿ ಮುದಗಲ್ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯಿಂದ ಮಕ್ಕಳಲ್ಲಿ ಆರೋಗ್ಯ ವೃದ್ಧಿಸುತ್ತದೆ. ಗ್ರಾಮೀಣ ಕ್ರೀಡಾ ಕೂಟಗಳನ್ನು ನಡೆಸುವುದರಿಂದ ಪ್ರತಿಭಾವಂತರನ್ನು ಗುರ್ತಿಸಿದಂತಾಗುತ್ತದೆ. ಸರ್ಕಾರ ನಡೆಸುತ್ತಿರುವ ಇಂತಹ ಕ್ರೀಡಾಕೂಟಗಳು ಯಶಸ್ವಿಯಾಗಲು ಎಲ್ಲರ ಸಹಕಾರ ಅವಶ್ಯಕ ಎಂದರು.
ಮುಖ್ಯ ಅತಿಥಿಗಳಾಗಿ ಯವ ಮುಖಂಡ ಮಹಾಂತೇಶ ಪಾಟೀಲ್ ಮಾತನಾಡಿ ಕ್ರೀಡಾಕೂಟಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಭಾಗವಹಿಸಲು ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದರು.
ಅತಿಥಿ ವಿವಿ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ್ ಮಟ್ಟೂರು, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಮೂಲಿಮನಿ ಮಾತನಾಡಿದರು. ಅತಿಥಿಗಳಾಗಿ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ಗ್ರಾನೈಟ ಉದ್ಯಮಿ ಸುರೇಂದ್ರೌಗೌಡ ಪಾಟೀಲ್, ಡಾ.ಅಯ್ಯಪ್ಪ ಬನ್ನೀಗೋಳ, ಶಿಕ್ಷಣಾಧಿಕಾರಿ ನಾಗನಗೌಡ ಬಯ್ಯಾಪೂರ, ಸಿಆರ್‌ಸಿ ರವಿಂದ್ರ, ಮಹಾಮುನಿಯಪ್ಪ, ಬಾಲಕೀಯರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬಾಲಚಂದ್ರ ದಾಸರ್, ಎಂ.ಬಿ. ಗೌಡರ್, ಉದಯಕುಮಾರ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.