ರಾಯಚೂರು

ಸಿಎಂ ಸಿದ್ದುಗೆ ನೌಕರರ ಸಂಘದಿಂದ ಸನ್ಮಾನ

Published On :

ಸಿಂಧನೂರು: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಸಿಂಧನೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ರಾಮಯ್ಯರನ್ನು ಬಾಲಕರ ಪ.ಪೂ. ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಜಗದೀಶ ಓತೂರು ಆತ್ಮೀಯವಾಗಿ ಸನ್ಮಾನಿಸಿದರು.
ನಂತರ ಸಿಎಂಗೆ ವಿವಿಧ ಬೇಡಿಕೆಗಳ ಮನವಿಪತ್ರವನ್ನು ನೀಡಿ ಗಮನ ಸೆಳೆದರು. ತಾಲೂಕಿನ ನೌಕರರ ಭವನದ ನಿರ್ಮಾಣಕ್ಕೆ ಅಗತ್ಯವಾದ ನಿವೇಶನ ನೀಡಬೇಕು. ನೌಕರರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ನಿಯಂತ್ರಿಸಲು ಆರೋಗ್ಯ ಇಲಾಖೆಯಲ್ಲಿರುವಂತೆ ಹಲ್ಲೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಬೇಕು.
 ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆಗಳಲ್ಲಿ ಶೇಕಡಾ 38 ರಷ್ಟು ವ್ಯತ್ಯಾಸ ಸರಿಪಡಿಸಬೇಕು. ಬೆಂಗಳೂರು ಮಹಾನಗರ ಪಾಲಿಕೆಗೆ ಇತ್ತೀಚೆಗೆ ಶೇಕಡಾ 5 ಮನೆ ಬಾಡಿಗೆ ಭತ್ಯೆ ಹೆಚ್ಚಿಸಬೇಕು. ಸರ್ಕಾರಿ ನೌಕರರ ವರ್ಗಾವಣೆಗೆ ಏಕರೂಪದ ನಿಯಮಾವಳಿಗಳ ಹೊಸ ಮಾರ್ಗಸೂಚಿ ರೂಪಿಸಬೇಕು.
 ದುರುದ್ದೇಶದಿಂದ ರಾಯಚೂರಿನಿಂದ ಯಲಬುರ್ಗಾಕ್ಕೆ ವರ್ಗಾವಣೆ ಮಾಡಲಾದ ಜಿಲ್ಲಾಧ್ಯಕ್ಷ ಮಹಿಬೂಬ್ಪಾಷಾರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು. ಹೈ- ಕ ಅಭಿವೃದ್ಧಿಗಾಗಿ ಸಂವಿಧಾನದ 371(ಜೆ) ಕಲಂ ಕೂಡಲೇ ಜಾರಿಗೊಳಿಸಬೇಕೆಂದು ಸಿಎಂಗೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರಂಗನಾಥ ಗುಡಿ, ತಾಲೂಕಾ ಗೌರವಾಧ್ಯಕ್ಷ ರಾಮಣ್ಣ, ಖಜಾಂಚಿ ಹನುಮಂತಪ್ಪ, ಉಪಾಧ್ಯಕ್ಷ ನೂರಲಿ, ಕಾರ್ಯದರ್ಶಿ ಶರಣಬಸವಯ್ಯ, ಸಹ ಕಾರ್ಯದರ್ಶಿ ಅಮರಯ್ಯ ವಿರುಪಾಪುರ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.