ರಾಯಚೂರು

ಇಂದಿನಿಂದ ಸಾರ್ವಜನಿಕ ಮಾಹಿತಿ ಆಂದೋಲನ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಆ.28
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಜನಪ್ರಿಯ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆ.29ರಿಂದ ಮೂರು ದಿನ ಸಾರ್ವಜನಿಕ ಮಾಹಿತಿ ಆಂದೋಲನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆ.29ರಿಂದ 31ರವರೆಗೆ ಆ. 31ರವರೆಗೆ ಆಂದೋಲನ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸರ್ಕಾರದ ವಾರ್ತಾ ಶಾಖೆ, ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವಾಲಯ, ಅನ್ಯ ಮಾಧ್ಯಮ ಘಟಕಗಳು, ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಆಂದೋಲನಕ್ಕೆ ಸಚಿವ ಚಾಲನೆ: ಆ.29ರಂದು ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬೆಳಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆಂದೋಲನಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಇಲಾಖೆಗಳಿಂದ ಈ ವೇಳೆ ವಸ್ತು ಪ್ರದರ್ಶನ ಹಮ್ಮಿಕೊಂಡಿದ್ದು ಇದಕ್ಕಾಗಿ ಸುಮಾರು 40ಕ್ಕೂ ಹೆಚ್ಚಿನ ಮಳಿಗೆಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಪಿಐಬಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಎಸ್.ವೆಂಕಟೇಶ್ವರ್, ಆಂದೋಲನದ ವೇಳೆ ದಿನವೂ ಜನಪ್ರಿಯ ಯೋಜನೆ ಮತ್ತು ಇಲಾಖಾವಾರು ಸೌಲತ್ತುಗಳ ಬಗ್ಗೆ ವಿಚಾರ ಸಂಕಿರಣ ನಡೆಯಲಿವೆ. ಮಧ್ಯಾಹ್ನ ವಸ್ತು ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಜರುಗಲಿವೆ. ಸಂಜೆ ಚಲನಚಿತ್ರ ಪ್ರದರ್ಶನ ಇತರ ಸಾಂಸ್ಕೃತಿಕ ಚಟುವಟಿಕೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಾಥಾ: ಆಂದೋಲನದ ಅಂಗವಾಗಿ ಆ.29ರಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಜಿಪಂ ಸಿಇಒ ಡಾ. ಮುದ್ದುಮೋಹನ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಕರು, ಕಲಾ ತಂಡ ಗಳ ಮೂಲಕ ಜಾಥಾ ರಂಗಮಂದಿರಕ್ಕೆ ಆಗಮಿಸಲಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಪಿ.ಜಿ. ಪಾಟೀಲ್, ಶಿವಾಮೇಸ್ತ್ರಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.