'ಇತಿಹಾಸ ಅಧ್ಯಯನ ಅವಶ್ಯ'
ಕನ್ನಡಪ್ರಭ ವಾರ್ತೆ ಲಿಂಗಸ್ಗೂರು ಆ.30
ದೇಶದಲ್ಲಿ ರಾಜ, ಮಹಾರಾಜರು ನಡೆಸಿದ ಯುದ್ಧ, ದಾಳಿಗಳ ಕುರಿತ ಇತಿಹಾಸ ತಿಳಿಯುವ ಬದಲು ಆಯಾ ಪ್ರದೇಶ, ಪ್ರಾಂತದಲ್ಲಿನ ಧಾರ್ಮಿಕ, ಕಲೆ, ಸಂಸ್ಕೃತಿಗಳ ಬಗ್ಗೆ ಅಧ್ಯಯನ ಮಾಡಬೇಕೆಂದು ಸಹಾಯಕ ಆಯುಕ್ತ ಟಿ.ಯೋಗೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕ ಸಂಘದಿಂದ ಶುಕ್ರವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಿಂಗಸ್ಗೂರು ತಾಲೂಕಿನಲ್ಲಿ ಇತಿಹಾಸ ಸಾರಿ ಹೇಳುವ ಅನೇಕ ಸ್ಥಳಗಳು ಕಾಣಸಿಗುತ್ತವೆ. ಅಂತಹ ಸ್ಥಳಗಳ ಕುರಿತು ವಿದ್ಯಾರ್ಥಿಗಳು ಆಸಕ್ತಿ ವಹಿಸಿ ಅಧ್ಯಯನ ಮಾಡಿದರೆ ಅಭಿವೃದ್ಧಿ ಬಗ್ಗೆ ಚಿಂತನೆ ಮೂಡುತ್ತದೆ. ಐತಿಹಾಸಿಕ ದೇವಸ್ಥಾನಗಳ ನಿರ್ಮಾಣ, ಅಲ್ಲಿನ ಶಿಲ್ಪ ಕಲೆಗಳ ಕೆತ್ತನೆ, ಅಂದಿನ ಧಾರ್ಮಿಕ ಆಚರಣೆ, ವಾಸ್ತು ಶಿಲ್ಪಗಳ ಕುರಿತು ಆಳವಾಗಿ ಅಧ್ಯಯನ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಟಿ. ಕಲ್ಲಯ್ಯ, ಜಿಪಂ ಸದಸ್ಯ ಭೂಪನಗೌಡ ಕರಡಕಲ್, ಪ್ರಾಚಾರ್ಯ ರಾಜಾಸಾಬ, ಇತಿಹಾಸ ಉಪನ್ಯಾಸಕ ಸಂಘದ ಜಿಲ್ಲಾದ್ಯಕ್ಷ ನರಸಪ್ಪ ಭಂಡಾರಿ, ಮಂಜುನಾಥ, ಬಸವರಾಜ ಮೇಟಿ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

