ಗ್ರಾಪಂ ನೌಕರರಿಗೆ ಹೊಸ ವೇತನ ನೀಡಿಕೆಗೆ ಆಗ್ರಹ
ರಾಯಚೂರು: ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು ನೌಕರರಿಗೆ ಅನುಮೋದನೆ, ಹೊಸ ವೇತನ ಹಾಗೂ ಬಾಕಿ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಜಿಲ್ಲೆಯ 164 ಗ್ರಾಪಂ.ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 1,300ರಿಂದ 1400 ನೌಕರರಲ್ಲಿ ಬಹುತೇಕರು ಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ನೌಕರರ ಹೋರಾಟದಿಂದ 2011ರಲ್ಲಿ ಕನಿಷ್ಠ ಕೂಲಿ ಜಾರಿಯಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ಶೇ. 70ರಷ್ಟು ಗ್ರಾಪಂ.ಗಳಲ್ಲಿ ಹೊಸ ವೇತನ ನೀಡಿರುವುದಿಲ್ಲ.
ವರ್ಷ ಕಳೆದರೂ ಭರವಸೆ ಈಡೇರಿಲ್ಲ: 2012ರಲ್ಲಿ ಜಿಪಂ ಮುಂದೆ ನೌಕರರು ಧರಣಿ ನಡೆಸಿದಾಗ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕನಿಷ್ಠ 3 ತಿಂಗಳಲ್ಲಿ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಅನುಮೋದನೆ ನೀಡಿರುವುದಿಲ್ಲವೆಂದು ಆರೋಪಿಸಿದ್ದಾರೆ.
ಪಂಚಾಯಿತಿ ನೌಕರರಿಗೆ 8-10 ತಿಂಗಳಿಂದ ಬಾಕಿ ಇರುವ ವೇತನ ಕೊಡಿಸಬೇಕು. ಪ್ರತಿ ತಿಂಗಳ 5ನೇ ತಾರೀಕಿನೊಳಗೆ ವೇತನ ಪಾವತಿಸಬೇಕು. ಜಿಲ್ಲೆಯ ಎಲ್ಲ ಗ್ರಾಪಂ ನೌಕರರಿಗೆ ಜನಶ್ರೀ ವಿಮಾ ಯೋಜನೆ ಜಾರಿಯಾಗಬೇಕು. ಬಿಲ್ ಕಲೆಕ್ಟರ್ಗಳ 10 ವರ್ಷ ಪೂರ್ಣಗೊಂಡ ನೌಕರರ ಜೇಷ್ಠತಾ ಪಟ್ಟಿಯಲ್ಲಿ ಪ್ರಕಟಿಸಬೇಕು. ಅರ್ಹ ನೌಕರರಿಗೆ ಕಾರ್ಯದರ್ಶಿ ಗ್ರೇಡ್- 2ಗೆ ಬಡ್ತಿ ನೀಡಬೇಕೆಂದು ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಮಲ್ಲಪ್ಪ ಹೂಗಾರ, ಉಪಾಧ್ಯಕ್ಷ ಕೆ.ನಾರಾಯಣ, ಪ್ರಧಾನ ಕಾರ್ಯದರ್ಶಿ ಮಹಾದೇವಪಪ ಜಂಬಲದಿನ್ನಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

